NEWSಕೃಷಿನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಕೈಗೆ ಸಿಗದ ದ್ರಾಕ್ಷಿ ಹುಳಿ ಅಂತಿದ್ದಾರೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಸರ್ಕಾರ ಪೂರ್ಣಾವಧಿ ಪೂರೈಸಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಈಗ ಮುಖ್ಯಮಂತ್ರಿಗಳಲ್ಲ. ಹಾಗಾಗಿ ಕೈಗೆ ಸಿಗದ ದ್ರಾಕ್ಷಿ ಹುಳಿ ಅಂತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನಾಶೀರ್ವಾದ ಕಾರ್ಯಕ್ರಮ ಹಿನ್ನೆಯಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ದೊಡ್ಡಹಳ್ಳಿ ಗ್ರಾಮಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಸಂಸತ್‍ನಲ್ಲಿ ಮೊದಲಬಾರಿಗೆ ನಮ್ಮ ಪರಿಚಯ ಮಾಡಿಕೊಡಲು ವಿಪಕ್ಷ ಬಿಡಲಿಲ್ಲ. ಇದೊಂದು ಕಪ್ಪು ಚುಕ್ಕೆ. ಹೀಗಾಗಿ ಜನರ ಮುಂದೆ ಹೋಗಿ ಜನಾರ್ಶಿವಾದ ಯಾತ್ರೆ ಮಾಡುತ್ತಿದ್ದೇವೆ ಎಂದರು.

ಇನ್ನು ಹಾಸನ ಜಿಲ್ಲೆ ದೊಡ್ಡ ಪ್ರಮಾಣದ ರೈತರಿರುವ ಜಿಲ್ಲೆ. ಅವರ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ಪ್ರತಿ ಜಿಲ್ಲೆಯ ರೈತರಿಗೂ ಸಮಸ್ಯೆ ಇದೆ. ಆಯಾ ಭಾಗಕ್ಕೆ ಹೋಗಿ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಮಧ್ಯವರ್ತಿಗಳಿಂದ ರೈತರಿಗೆ ಮೋಸ ಆಗುತ್ತಿತ್ತು. ಇದರಿಂದ ರೈತರಿಗೆ ಅನುಕೂಲ ಆಗಲಿ ಎಂದು ಕೃಷಿ ಕಾಯ್ದೆ ಜಾರಿಗೆ ತಂದಿದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಎಲ್ಲ ಯೋಜನೆಗಳಿಗೆ ಅವರ ಹೆಸರಿಟ್ಟುಕೊಂಡವರು ಸಿದ್ದರಾಮಯ್ಯ. ದುಡ್ಡು ಮೋದಿಯವರದ್ದು, ಅನ್ನಭಾಗ್ಯ ಎಂಬ ರೀತಿಯ ಹೆಸರು ಸಿದ್ದರಾಮಯ್ಯನವರದು ಎಂದು ಕಿಡಿಕಾರಿದರು.

ಮೇಕೆದಾಟು ಯೋಜನೆ ಮಾಡಿದ್ರೆ ನಮಗೂ ಲಾಭ ಆಗುತ್ತೆ. ತಮಿಳುಮಾಡಿನವರಿಗೂ ಲಾಭ ಆಗುತ್ತೆ. ಇದಕ್ಕೆ ವಿರೋಧ ಮಾಡುವವರ ಜೊತೆ ಕುಳಿತು ಮಾತನಾಡುತ್ತೇವೆ ಎಂದು ತಿಳಿಸಿದರು.

ಬಳಿಕ ಹಾಸನದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ವಿಧಿಸಿರುವ ಕೋವಿಡ್ ನಿಯಮ ಗಾಳಿಗೆ ತೂರಿ ಹೆಚ್ಚಿನ ಜನ ಸೇರಿ ಸಭೆ ನಡೆಸಿದ್ದು ಕಂಡು ಬಂತು. ಅಷ್ಟೇ ಅಲ್ಲದೆ ವೇದಿಕೆ ಮೇಲೆ ಕುಳಿತಿದ್ದ ಸಚಿವರಾದ ಶೋಭಕರಂದ್ಲಾಜೆ, ಗೋಪಾಲಯ್ಯ ಸೇರಿದಂತೆ ಯಾರೊಬ್ಬರು ಮಾಸ್ಕ್ ಧರಿಸಿರಲಿಲ್ಲ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ