NEWSಕೃಷಿನಮ್ಮರಾಜ್ಯ

ಬಿತ್ತನೆ ಬೀಜ ಕೊರತೆ: ಪರ್ಯಾಯ ಬೆಳೆಗೆ ರೈತರ ಮನವೊಲಿ ಎಂದ ಸಚಿವ ನಿರಾಣಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಜಿಲ್ಲೆಯಲ್ಲಿ ಸೋಯಾಬೀನ್ ಸೇರಿದಂತೆ ಕೆಲ ಬಿತ್ತನೆ ಬೀಜಗಳ ಕೊರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಪರ್ಯಾಯ ಬೆಳೆ ಬೆಳೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ ರೈತರಲ್ಲಿ ಮನವಿ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗುಲ್ಬರ್ಗಾ ವಿಶ್ವವಿದ್ಯಾಲದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈಗ ಅಭಾವವಾಗಿರುವ ಸೋಯಾಬೀನ್ ಮುಂತಾದ ಬಿತ್ತನೆ ಬೀಜಕ್ಕೆ ಪರ್ಯಾಯವಾಗಿ ಬೇರೆ ಬೀಜಗಳನ್ನು ಬಿತ್ತನೆ ಮಾಡಲು 10 ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಈ ಕುರಿತು ವಾಹನಗಳ ಮೂಲಕ ಹಳ್ಳಿಗಳಿಗೆ ತೆರಳಿ ಮನೆ-ಮನೆಗಳಿಗೆ ಪ್ರಚಾರ ಮಾಡಬೇಕು. ಸೋಯಾಬೀನ್ ಬೆಳೆಗಳಿಗೆ ಪರ್ಯಾಯ ಬೆಳೆ ಬೆಳೆಯುವಂತೆ ರೈತರಿಗೆ ತಿಳಿಹೇಳಿ ಅವರ ಮನವೊಲಿಸಬೇಕು ಎಂದು ಸಚಿವರು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ವಿ.ವಿ, ಜ್ಯೋತ್ಸ್ನಾ ಮಾತನಾಡಿ, ಸ್ಥಳೀಯವಾಗಿ ಬಿತ್ತನೆ ಬೀಜ ಉತ್ಪಾದನೆಯಗಿಲ್ಲ. ಬಿತ್ತನೆ ಬೀಜದ ಬೇಡಿಕೆ ಹೆಚ್ಚಾಗಿರುವ ಜೊತೆಗೆ ಮಧ್ಯಪ್ರದೇಶ ಮತ್ತಿತರೆಡೆಯಿಂದ ಬಿತ್ತನೆ ಬೀಜಗಳು ಸರಬರಾಜಗಿಲ್ಲ. ಆದ್ದರಿಂದ ಈ ಬಾರಿ ಸಮಸ್ಯೆಯಾಗಿದೆ ಎಂದ ಅವರು, ರೈತರು ಪರ್ಯಾಯ ಬೆಳೆಗಳನ್ನು ಬೆಳೆಯಲು ಮನವೊಲಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಮಾತನಾಡಿ, ಈ ಹಿಂದೆ ರೈತರೇ ಬಿತ್ತನೆ ಬೀಜಗಳನ್ನು ತಯಾರು ಮಾಡಿಕೊಳ್ಳುತ್ತಿದ್ದರು, ಇತ್ತೀಚಿನ ವರ್ಷಗಳಲ್ಲಿ ಕಂಪೆನಿ ಬಿತ್ತನೆ ಬೀಜಗಳನ್ನು ಆಶ್ರಯಿಸುತ್ತಿರುವುದೇ ಇದಕ್ಕೆಲ್ಲಾ ಕಾರಣ. ರೈತರೇ ಬಿತ್ತನೆ ಬೀಜಗಳನ್ನು ಉತ್ಪಾದನೆ ಮಾಡುವಂತಹ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕೆಂದು ಮನವಿ ಮಾಡಿದರು.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಕಳೆದ ಮೂರು ವರ್ಷದ ಹಿಂದೆ ಎಸ್ ಸಿಪಿ / ಟಿಎಸ್ಪಿ ಯೋಜನೆಯಡಿಯಲ್ಲಿ ಬಿಡುಗಡೆಯಾದ ಅನುದಾನ ಬಳಕೆ ಮಾಡದೇ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನೇ ಪೂರ್ಣಗೊಳಿಸದ ಕೃಷ್ಣಭಾಗ್ಯ ಜಲ ನಿಗಮದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಕಾನೂನು ಪ್ರಕಾರ ಆಯಾ ವರ್ಷದ ಬಿಡುಗಡೆಯಾದ ಅನುದಾನ ಬಳಕೆ ಮಾಡದ ಅಧಿಕಾರಿಗಳನ್ನು ಅಮಾನತು ಮಾಡಿ, ಎಫ್‍ಐಆರ್ ದಾಖಲಿಸಬೇಕು ಎಂದು ಸಚಿವರನ್ನು ಆಗ್ರಹಿಸಿದರು.

ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಟೆಂಡರ್ ಓಪನ್ ಮಾಡಿಲ್ಲ. ಕಾಮಗಾರಿಗೆ ಅಕ್ಷೇಪಣೆ ಬಂದಿದ್ದರಿಂದ ಮುಂದಿನ ಪ್ರಕ್ರಿಯೆಗಾಗಿ ನಿರ್ದೇಶನ ನೀಡಲು ಎಂ.ಡಿ. ಅವರಿಗೆ ಪತ್ರ ಬರೆಯಲಾಗಿದೆ ಎಂದು ಸಮಜಾಯಿಷಿ ನೀಡಿದರು. ಆಗ ಮಧ್ಯೆ ಪ್ರವೇಶಿಸಿದ ಸಚಿವರು ಈ ಕೂಡಲೇ, ಟೆಂಡರ್ ಓಪನ್ ಮಾಡಿ ಉದ್ದೇಶಿತ ಕಾಮಗಾರಿಗಳನ್ನು ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಲ್ಲಾಮಾರಿ ನೀರಾವರಿ ಯೋಜನೆಯಲ್ಲೂ ಕಳಪೆ ಕಾಮಗಾರಿ ನಡೆದಿದ್ದು, ವಿಧಾನಸಭೆಯ ಅಧಿವೇಶನದಲ್ಲಿ ನಾನು ಹಾಗೂ ಚಿಂಚೋಳಿ ಶಾಸಕರಾದ ಡಾ. ಅವಿನಾಶ್ ಜಾಧವ್ ಅವರು ಪ್ರಶ್ನಿಸಿದಾಗ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಉತ್ತರಿಸಿದ್ದರು. ಆದರೆ, ಯಾವುದೇ ಪ್ರಗತಿ ಕಂಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಶಾಸಕರಾದ ಸುಭಾಶ್ ಗುತ್ತೇದಾರ್, ಕನೀಜ್ ಫಾತಿಮಾ, ಡಾ. ಅವಿನಾಶ್ ಜಾಧವ್, ಬಸವರಾಜ್ ಮತ್ತಿಮೂಡ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಸುನೀಲ್ ವಲ್ಯಾಪುರೆ, ಕಲಬುರಗಿ ನಗರ ಪೊಲೀಸ್ ಆಯುಕ್ತ ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಡಿಎಫ್‍ಓ ಎಂ.ಎಂ. ವಾನತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ