Vijayapatha – ವಿಜಯಪಥ
Saturday, November 2, 2024
NEWSಕೃಷಿದೇಶ-ವಿದೇಶರಾಜಕೀಯ

ಮೇಕೆದಾಟು ಯೋಜನೆಗೆ ರಾಜ್ಯ ಬಿಜೆಪಿಗರು ಬದ್ಧರಾಗಿರಬೇಕು: ಎಚ್‌ಡಿಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್‌ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಈ ಎರಡೂ ಪಕ್ಷಗಳ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ‘ನಾವು ಯೋಜನೆ ಪರ ಇದ್ದೇವೆ’ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು.

ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು.ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು.ಈ ಕಾರ್ಯವನ್ನು ಜೆಡಿಎಸ್‌ ಯಾವಾಗಲೂ ಬೆಂಬಲಿಸುತ್ತದೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಮನೆಗೆ ಬಿಎಸ್‌ವೈ ಭೇಟಿ: 10 ಲಕ್ಷ ರೂ. ಆರ್ಥಿಕ ನೆರವು

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ