NEWSಕೃಷಿನಮ್ಮರಾಜ್ಯ

ಡಿ.13ರಂದು ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘ- ಹಸಿರು ಸೇನೆಯಿಂದ ಸುವರ್ಣ ಸೌಧಕ್ಕೆ ಮುತ್ತಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ.13ರಿಂದ ನಡೆಯುವ ಚಳಿಗಾಲ ಅಧಿವೇಶನದ ವೇಳೆ ರಾಜ್ಯದ ಎಲ್ಲಾ ರೈತರ ಸಮಸ್ಯೆಗಳ ಹಾಗೂ ಭೂಸ್ವಾಧೀನ ಕಾಯ್ದೆಯನ್ನು ಅಧಿಕೃತವಾಗಿ ಅಧಿವೇಶನದಲ್ಲಿ ಹಿಂಪಡೆಯುವಂತೆ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬೆಳಗಾವಿ ಜಿಲ್ಲಾ ರೈತ ಮುಖಂಡ ಕುಮಾರ್ ತಿಗಡಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ನೆರೆ ಸಂತ್ರಸ್ತರ ಪರಿಹಾರ, ಬೆಳೆಹಾನಿ ಸೇರಿ ಹಲವು ಸಮಸ್ಯೆಗಳ ಅನ್ನು ಕೂಡಲೇ ಬಗೆ ಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬೆಳಗಾವಿ ಜಿಲ್ಲೆಯ ಎಲ್ಲಾ ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದಿದ್ದಾರೆ.

ಸೇನೆಯ ರಾಜ್ಯ ಕಾರ್ಯದರ್ಶಿ ಬೀಮಶಿ ಗದಾಡಿ ಹಾಗೂ ಜಿಲ್ಲೆಯ ಎಲ್ಲ ರೈತ ಮುಖಂಡರು ಭಾಗಿಯಾಗುವರು. ಹೀಗಾಗಿ ಬೆಳಗಾವಿ ಜಿಲ್ಲಾದ್ಯಂತ ಎಲ್ಲ ರೈತರು ಕಾರ್ಯಕರ್ತರು ಡಿ.13ರಂದು ಸುವರ್ಣ ಸೌಧದ ಬಳಿ ಬರಬೇಕು. ಈ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಬೇಕಿದೆ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?