ಹಾವೇರಿ: ದೇವಗಿರಿಯಲ್ಲಿರುವ ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ(ವಿಬ್‍ಸೆಟಿ)ಯಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ 13 ದಿನಗಳ “ಕೃಷಿ ಉದ್ಯಮಿ” ತರಬೇತಿ ಆಯೋಜಿಸಲಾಗಿದೆ.
ಸುಧಾರಿತ ಕೃಷಿ ಪದ್ಧತಿ, ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ, ತೋಟಗಾರಿಕೆ, ಸುಧಾರಿತ ಬೀಜಗಳ ಉತ್ಪಾದನೆ, ಸುಧಾರಿತ ನೀರಾವರಿ ಪಧ್ಧತಿ, ಮಣ್ಣಿನ ಫಲವತ್ತತೆಯ ಪರೀಕ್ಷೆ , ಸಾವಯವ ಕೃಷಿ ಪದ್ಧತಿ, ಎರೆಹುಳು ಗೊಬ್ಬರ ತಯಾರಿಕೆ ಒಳಗೊಂಡಂತೆ ಸಮಗ್ರ ಕೃಷಿ ತರಬೇತಿ ನೀಡಲಾಗುವುದು.
ಸೆಪ್ಟೆಂಬರ್ 13 ರಿಂದ 25ರವರೆಗೆ ತರಬೇತಿ ನಡೆಯಲಿದೆ. ತರಬೇತಿ ಪಡೆಯಲು ಹಾವೇರಿ ಜಿಲ್ಲೆಯವರಿಗೆ ಮಾತ್ರ ಅವಕಾಶವಿದೆ. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದ್ದು, ಮೊದಲು ಅರ್ಜಿ ಸಲ್ಲಿಸಿದವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ. ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ ದೇವಗಿರಿ- ಹಾವೇರಿ. ದೂರವಾಣಿ ಸಂಖ್ಯೆ 08375-296360, 9611645907/ 9110865650 ಸಂಪರ್ಕಿಸಬಹುದು.