NEWSಕೃಷಿನಮ್ಮರಾಜ್ಯ

ಬನ್ನೂರು: ಸಾಧಿಸುವ ಗುರಿ ಇದ್ದರೆ ಸಾಧನೆ ಸುಲಭ: ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಛಲ ಮತ್ತು ಸಾಧಿಸುವ ಗುರಿ ಇದ್ದರೆ ಸಾಧನೆಯ ಶಿಖರವೇರಲು ಸುಲಭಸಾಧ್ಯ. ಜತೆಗೆ ಪ್ರತಿಯೊಬ್ಬರಿಗೂ ಸಾಧಿಸವ ಅವಕಾಶ ಬರುತ್ತದೆ ಆದರೆ ಅದನ್ನು ಕೆಲವರು ಮಾತ್ರ ಉಪಯೋಗಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಪಟ್ಟಣದ ವಿವೇಕಾನಂದ ವಿದ್ಯಾಸಂಸ್ಥೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲರಲ್ಲೂ ಏನೇ ಸಮಸ್ಯೆ ಬಂದರು ಎದುರಿಸುವ ಶಕ್ತಿಯಿದೆ. ಜವಾಬ್ದಾರಿಯು ಇದೆ. ಕೊಟ್ಟಂತಹ ಕೆಲಸವನ್ನು ನಾವು ಆ ಜವಾಬ್ದಾರಿಯಿಂದ ಮಾಡಿದರೆ ಯಶಸ್ಸು ಕಾಣಲು ಸಾಧ್ಯ. ಮತ್ತೆ ಸಮಾಜದಲ್ಲಿ ಉನ್ನತ ಸ್ಥಾನ ತಾನಾಗಿಯೇ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಇನ್ನು ಪ್ರಾಮಾಣಿಕತೆಯಿಂದ ನಡೆದರೆ ಜೀವನ ಹಸನಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದ ಅವರು, ರೈತರ ಜೀವನ ಹಸನಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರಲಿದೆ, ಹೀಗಾಗಿ ನಿಮ್ಮ ಸಲಹೆ ಸೂಚನೆಗಳು ಬಹಳ ಮುಖ್ಯವಾಗುತ್ತವೆ ಎಂದು ತಿಳಿಸಿದರು.

ಸದ್ಯದಲ್ಲೇ ತೈಲ ಬೆಲೆ ಕಡಿಮೆಯಾಗಲಿದೆ: ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ಬಿಜೆಪಿ ಕಾರಣವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿರುವುದರಿಂದ ಅನಿವಾರ್ಯವಾಗಿ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ರೈತರ ಜೊತೆ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಹಿತಕಾಯಲು ಬೆಲೆ ಕಡಿಮೆ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು.

ಕೋವಿಡ್-19 ಮಾರ್ಗಸೂಚಿಯ ನಡುವೆಯೂ ಹಲವು ನಿಯಮಗಳನ್ನು ಸಡಿಲಗೊಳಿಸಿ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ. ಪ್ರಸ್ತುತ 5 ದಿನಗಳ ಹಬ್ಬ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕಿಂತ ಇನ್ನೆನು ಮಾಡಲು ಸಾಧ್ಯ ಎಂದರು.

ಈ ವೇಳೆ ಬನ್ನೂರು ವಿವೇಕಾನಂದ ವಿದ್ಯಾಸಂಸ್ಥೆಯ ಸಂಸ್ಥಾಪಕ ಪ್ರಕಾಶ್‌ ಮತ್ತಿತರರು ಇದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ