ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ 3 ಕೃಷಿ ಕಾಯ್ದೆ ವಾಪಸ್ ಪಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮಾಡಿ ಕೇಂದ್ರದ ನಿರ್ಧಾರಕ್ಕೆ ಸ್ವಾಗತ ಕೋರಿದ್ದಾರೆ.
ನಾನು ಪ್ರಧಾನಿಯನ್ನು ಸ್ವಾಗತಿಸುತ್ತೇನೆ. ರೈತರ ಹೋರಾಟಕ್ಕೆ ಬೆಲೆ ಕೊಟ್ಟ ಸರ್ಕಾರದ ನಿರ್ಧಾರ ಸ್ವಾಗತ ಮಾಡೋದಾಗಿ ಟ್ವೀಟ್ ಮಾಡಿ ಶುಭ ಕೊರಿದ್ದಾರೆ.
ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು.
ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
I welcome PM @narendramodi’s decision to repeal the 03 #FarmLaws. My salute to all the farmers who put up democratic resistance against the laws. Debate and discussion is key in a parliamentary set up. Here is the speech I had made against the farm laws in the RS in Sept 2020. pic.twitter.com/7z4FDkvbiY
— H D Devegowda (@H_D_Devegowda) November 19, 2021