Please assign a menu to the primary menu location under menu

NEWSಕೃಷಿನಮ್ಮರಾಜ್ಯ

ವಿವಾದಿತ ಕೃಷಿ ಕಾನೂನು ರದ್ದು- ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಉತ್ತಮ ಬೆಳವಣಿಗೆ : ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಆ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.

ಈ ಕುರಿತಂತೆ ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.

ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ... ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ... ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನ... ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌