NEWSಕೃಷಿನಮ್ಮರಾಜ್ಯ

ನ.29ರಂದು ಕಡಲೆ ಕಾಯಿ ಪರಿಷೆ- ಜಾತ್ರೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾರ್ತಿಕ ಮಾಸದ ಕಡೆಯ ಸೋಮವಾರ ನಡೆಯುವ ಪಾರಂಪರಿಕ ಕಡಲೇಕಾಯಿ ಪರಿಷೆ ಜಾತ್ರೆಗೆ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದ ಇಲಾಖೆಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ತಿಳಿಸಿದ್ದಾರೆ.

ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನಾಡಿನ ಸಂಸ್ಕೃತಿ ಬಿಂಬಿಸುವ ಕಡಲೇಕಾಯಿ ಪರಿಷೆಯನ್ನು ಸಂಪ್ರದಾಯ, ಸಂಸ್ಕ್ರತಿ ಮತ್ತು ಜಾನಪದ ವೈಭವದಿಂದ ನವೆಂಬರ್ 29 ರಿಂದ ಆಚರಿಸಲಾಗುವುದು ಎಂದು ತಿಳಿಸಿದರು.

ಹೆಚ್ಚಿನ ಜನರು ಭೇಟಿ ನೀಡುವುದರಿಂದ ಮೂಲಭೂತ ಸೌಕರ್ಯ, ರಕ್ಷಣೆಗಾಗಿ ಪೊಲೀಸ್ ಮತ್ತು ಬಿಬಿಎಂಪಿಯ 700 ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸ್ಥಳೀಯ ಶಾಸಕ ಎಲ್.ಎ.ರವಿ ಸುಬ್ರಹ್ಮಣ್ಯ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಇತಿಹಾಸ: ಕಡಲೆ ಕಾಯಿ ಪರಿಷೆ ಬೆಂಗಳೂರು ನಗರದ ಬಸವನಗುಡಿ ಪ್ರದೇಶದಲ್ಲಿ ನಡೆಯುವ ವಾರ್ಷಿಕ ನೆಲಗಡಲೆ ಜಾತ್ರೆ. ಬಸವನಗುಡಿ ಕಡಲೆ ಕಾಯಿ ಪರಿಷೆಯನ್ನು ಬುಲ್ ಟೆಂಪಲ್ ರಸ್ತೆಯ ಎರಡೂ ಬದಿಗಳಲ್ಲಿ ಮತ್ತುಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ದಿನಗಳು ನಡೆಸಲಾಗುತ್ತದೆ.

ಬೆಂಗಳೂರು ಗಾತ್ರದಲ್ಲಿ ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು. ಆದರೆ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು. ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನ ಪ್ರಾರ್ಥಿಸಲು ಆರಂಭಿಸಿದರು.

ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು 16 ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಕಡಲೆ ಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ.

ಏನನ್ನು ನಿರೀಕ್ಷಿಸಬಹುದು?: ಕಡಲೆಕಾಯಿ ಪರಿಷೆ ಸಮಯದಲ್ಲಿ ಗ್ರಾಹಕರು ನೆಲಗಡಲೆಗಳನ್ನು ರೈತರಿಂದ ನೇರವಾಗಿ ಮಾರುಕಟ್ಟೆ ದರಕ್ಕಿಂತ ಅಗ್ಗವಾಗಿ ಖರೀದಿಸುತ್ತಾರೆ. ಕಡಲೆಕಾಯಿ ಪರಿಷೆಯ ಸಂದರ್ಭದಲ್ಲಿ ಬಸವನ ಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನಡೆಯುತ್ತದೆ.

ಅಲಂಕೃತ ಬೀದಿಗಳಲ್ಲಿ ಸಾಕಷ್ಟು ಶಾಪಿಂಗ್, ಆಹಾರ ಮಳಿಗೆಗಳು, ಆಟಗಳು ಮತ್ತು ಮಕ್ಕಳಿಗೆ ಆಟಿಕೆಗಳು ಇರುತ್ತವೆ. ಬಸವನಗುಡಿ ಮತ್ತು ಸುತ್ತಮುತ್ತಲಿನ ಜನರು ಕಡಲೆಕಾಯಿ ಪರಿಷೆಯನ್ನು ಕಾತರದಿಂದ ಎದುರು ನೋಡುತ್ತಾರೆ ಮತ್ತು ಸಂಭ್ರಮಾಚರಣೆಗಳಲ್ಲಿ ಪಾಲ್ಗೊಳ್ಳುತ್ತಾರೆ.

ಯಾವಾಗ: ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆ ಕಾಯಿ ಪರಿಷೆ ನಡೆಯುತ್ತದೆ. ಇದು ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬರುತ್ತದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ