ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನದವರೆಗೂ ಭಾರಿ ಮಳೆಯಾಗಲಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಹಾಸನ್, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ. ಇನ್ನೆರಡು ದಿನ ಮೋಡಕವಿದ ವಾತಾವರಣ ಮುಂದುವರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಮುನ್ಸೂಚನೆ ಕೊಡುತ್ತಿರುವ ಹವಾಮಾನ ಇಲಾಖೆ. ಬೆಂಗಳೂರು ನಗರದಲ್ಲೂ ಮುಂದಿನ ಮೂರು ದಿನ ಮಳೆ. ಬೆಂಗಳೂರು ನಗರದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ ಇದೆ. ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಬದಲಾಗಬಹುದು.
ಬಂಗಾಳಕೊಲ್ಲಿಯಿಂದ ಕರಾವಳಿ ಕಡೆ ಸಾಗುತ್ತಿರುವ ವಾಯುಭಾರ ಕುಸಿತವಾಗಿದೆ. ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದು ಬಂದಿದೆ.