Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ಅತಿವೃಷ್ಟಿ ಪರಿಸ್ಥಿತಿ ಮೇಲೆ ತೀವ್ರ ನಿಗಾವಹಿಸಿ: ತಹಸೀಲ್ದಾರರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

ಬೆಳೆಹಾನಿ ಹಾಗೂ ಮನೆಹಾನಿ ಪರಿಹಾರ ಪಾವತಿಗೆ ತ್ವರಿತ ಕ್ರಮಕ್ಕೂ ಮುಂದಾಗಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅತಿವೃಷ್ಟಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಿ ಎಂದು ಜಿಲ್ಲೆಯ ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆ ಕುರಿತಂತೆ ಬೆಂಗಳೂರಿನಿಂದ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ತರುವಾಯು ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿದರು.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ಹಾನಿ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಮನೆಗೆ ನೀರು ನುಗ್ಗಿ ಹಾನಿಯಾದರೆ ತಕ್ಷಣ ಸರ್ಕಾರದ ನಿಯಮಾವಳಿ ಅನುಸಾರ ಪ್ರಕೃತಿ ವಿಕೋಪ ನಿಧಿಯಿಂದ ತುರ್ತು ಪರಿಹಾರ ಪಾವತಿಗೆ ಕ್ರಮವಹಿಸುವಂತೆ ಸೂಚನೆ ನೀಡಿದರು.

ಮನೆಹಾನಿ, ಬೆಳೆಹಾನಿ ಮತ್ತು ತೋಟಗಾರಿಕೆ ಹಾನಿ ಕುರಿತಂತೆ ನಿಖರವಾದ ಮಾಹಿತಿ ಸಂಗ್ರಹಿಸಬೇಕು. ಕಡ್ಡಾಯವಾಗಿ ಹಾನಿ ಪ್ರದೇಶವನ್ನು ವಿಡಿಯೋ ಚಿತ್ರೀಕರಣ, ಫೋಟೋಗ್ರಫಿ, ಜಿಪಿಎಸ್ ಕೈಗೊಂಡು ನಿಖರವಾದ ಹಾನಿಯ ದಾಖಲೀಕರಣ ಮಾಡಿಸಬೇಕು. ನಷ್ಟ ಅನುಭವಿಸಿದ ಯಾವೊಬ್ಬ ಫಲಾನುಭವಿಯೂ ಪರಿಹಾರದಿಂದ ವಂಚಿತವಾಗದಂತೆ ಎಚ್ಚರವಹಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆಹಾನಿ ದೂರುಗಳ ಕುರಿತಂತೆ ಶಿಗ್ಗಾಂವ, ಸವಣೂರ ಸೇರಿದಂತೆ ಶೀಘ್ರವೇ ವಿಶೇಷ ದೂರು ಸ್ವೀಕಾರ ಸಭೆಯನ್ನು ನಡೆಸಲಾಗುವುದು. ಈ ಸಭೆಯಲ್ಲಿ ಸ್ವೀಕೃತವಾದ ದೂರುಗಳಲ್ಲಿ ಅಧಿಕಾರಿಗಳ ಲೋಪವಿದ್ದರೆ ನಿರ್ಧಾಕ್ಷಿಣ್ಯವಾಗಿ ಅಂತಹ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ರೈತರ ಸಮಸ್ಯೆಗೆ ಸ್ಪಂದಿಸಿ: ರೈತ ಆತ್ಮಹತ್ಯೆ ಪ್ರಕರಣ, ಬಣವಿಗೆ ಬೆಂಕಿ ಬಿದ್ದ ಪ್ರಕರಣಗಳಲ್ಲಿ ಪರಿಹಾರ ಪಾವತಿಗೆ ತ್ವರಿತವಾಗಿ ಕ್ರಮಕೈಗೊಳ್ಳಿ. ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಿ ಆದ್ಯತೆ ಮೇಲೆ ಪರಿಹಾರಕ್ಕೆ ಕ್ರಮವಹಿಸಿ ಎಂದು ಸೂಚನೆ ನೀಡಿದರು.

ಶಿಥಿಲ ಶಾಲಾ ಕಟ್ಟಡ: ಜಿಲ್ಲೆಯಲ್ಲಿ ಶಿಥಿಲಗೊಂಡ ಶಾಲಾ ಕೊಠಡಿಗಳಲ್ಲಿ ತರಗತಿಗಳು ನಡೆಯುತ್ತಿದ್ದರೆ ತಕ್ಷಣವೇ ವಿದ್ಯಾರ್ಥಿಗಳನ್ನು ಸುರಕ್ಷಿತ ಕಟ್ಟಡಗಳಿಗೆ ಸ್ಥಳಾಂತರಿಸಿ ತರಗತಿಗಳನ್ನು ನಡೆಸಬೇಕು. ಶಿಥಿಲಗೊಂಡ ಕೊಠಡಿಗಳ ದುರಸ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಹಾನಿ ಮಾಹಿತಿ: ಮಳೆ ಪ್ರಮಾಣ, ಮನೆ ಹಾಗೂ ಬೆಳೆಹಾನಿ ಕುರಿತಂತೆ ಮಾಹಿತಿ ನೀಡಿದ ಅಧಿಕಾರಿಗಳು, ನವಂಬರ್ 18ರ ಮಳೆಗೆ 166 ಮನೆಗಳು, ನವಂಬರ್ 19ರ ಮಳೆಗೆ 567 ಮನೆಗಳು ಸೇರಿ ಎರಡು ದಿನದಲ್ಲಿ 733 ಮನೆಗಳಿಗೆ ಹಾನಿಯಾಗಿದೆ. ನವಂಬರ್ 18ರವರೆಗೆ ಒಟ್ಟಾರೆ 1125 ಮನೆಗಳು, ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ 18445.2 ಹೆಕ್ಟೇರ್ ಬೆಳೆಹಾನಿಯಾಗಿರುವುದಾಗಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ಸೂಚನೆ: ವಿಡಿಯೋ ಸಂವಾದದಲ್ಲಿ ವಿವಿಧ ಜಿಲ್ಲೆಗ ಮಳೆಹಾನಿ ಕುರಿತಂತೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಅಕಾಲಿಕ ಮಳೆಯಿಂದ ಹಾನಿಯಾದ ಆಯ್ದ ದುರ್ಬಲ ಪ್ರದೇಶಗಳಿಗೆ ಖುದ್ದಾಗಿ ಜಿಲ್ಲಾಧಿಕಾರಿಗಳು ಭೇಟಿ ನೀಡಬೇಕು. ಮನೆ, ಬೆಳೆಹಾನಿ, ರಸ್ತೆ ಸಂಪರ್ಕ ಕಡಿತಗಳನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು.

ಮನೆಹಾನಿ ಮತ್ತು ಬೆಳೆಹಾನಿ ಪರಿಹಾರಕ್ಕೆ ಕೂಡಲೇ ಸರ್ವೇ ನಡೆಸಿ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು. ಮನೆಗೆ ನೀರು ನುಗ್ಗಿ ಹಾನಿಯಾದ ಕುಟುಂಬಗಳಿಗೆ ತುರ್ತು ಪರಿಹಾರ ಒದಗಿಸಬೇಕು. ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಬೇಕು. ಅಗತ್ಯವಿದ್ದರೆ ಕಾಳಜಿ ಕೇಂದ್ರಗಳನ್ನು ತೆರೆದು ಸೌಕರ್ಯಗಳನ್ನು ಕಲ್ಪಿಸಬೇಕು.

ಮಳೆಯಿಂದ ಸಂಪರ್ಕ ಕಡಿತಗೊಂಡ ರಸ್ತೆಗಳ ದುರಸ್ತಿಗೆ ತುರ್ತು ಕ್ರಮವಹಿಸಬೇಕು. ಡೇ-ಟು-ಡೇ ಆಧಾರದ ಮೇಲೆ ಬೆಳೆಹಾನಿ ಸರ್ವೇ ಮಾಡಿ ವರದಿ ಸಲ್ಲಿಸಬೇಕು. ನಿಯಮಾನುಸಾರ ಮನೆಹಾನಿ ಹಾಗೂ ಬೆಳೆಹಾನಿ ಸಮೀಕ್ಷೆಗೆ ತಂಡಗಳನ್ನು ರಚಿಸಬೇಕು. ಮನೆ ಮತ್ತು ಬೆಳೆಹಾನಿ ಸಂದರ್ಭದಲ್ಲಿ ಜಿಪಿಎಸ್ ಮತ್ತು ಛಾಯಾಚಿತ್ರ ಹಾಗೂ ವಿಡಿಯೋ ಚಿತ್ರೀಕರಣ ಮಾಡಬೇಕು. ರಾಜಕಾಲುವೆಗಳಲ್ಲಿ ಸ್ವಚ್ಛತೆ, ಕೆರೆ –ಕಟ್ಟೆಗಳು ತುಂಬಿ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದರು.

ವಿಡಿಯೋ ಸಂವಾದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಹಾಗೂ ಶಿವಾನಂದ ಉಳ್ಳಾಗಡ್ಡಿ , ಎಲ್ಲ ತಹಸೀಲ್ದಾರರು, ನಗರ ಸ್ಥಳೀಯ ಮುಖ್ಯಸ್ಥರು, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ... ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ...