NEWSಕೃಷಿನಮ್ಮಜಿಲ್ಲೆ

ಸಂಸತ್ತಿನಲ್ಲಿ ವಿವಾದಿತ ಕೃಷಿ ಕಾಯ್ದೆ ಹಿಂಪಡೆಯುವ ದಿನ ರೈತರ ವಿಜಯ ದಿನ ಎಂದು ಆಚರಣೆಯಾಗಲಿ: ಮಾಲವಿಕ ಗುಬ್ಬಿವಾಣಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಂಸತ್ತಿನಲ್ಲಿ ರೈತವಿರೋಧಿ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ದಿನವನ್ನು ರೈತರ ವಿಜಯ ದಿನವನ್ನಾಗಿ ಆಚರಿಸಬೇಕೆಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಮಾಲವಿಕ ಗುಬ್ಬಿವಾಣಿ ಹೇಳಿದ್ದಾರೆ.

ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು “ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ನಿರ್ಧಾರವು ರೈತರಿಗೆ ಸಂದ ದೊಡ್ಡ ಗೆಲುವು. ನಮಗಾಗಿ ಕಠಿಣ ಹೋರಾಟ ಮಾಡಿದ ಎಲ್ಲ ರೈತರಿಗೆ ಪ್ರತಿಯೊಬ್ಬ ಭಾರತೀಯನೂ ಧನ್ಯವಾದ ಹೇಳಬೇಕು. ರೈತರ ಹೋರಾಟ ಹಾಗೂ ತ್ಯಾಗವು ಸದಾ ಸ್ಮರಣೆಯಲ್ಲಿರುತ್ತದೆ ಎಂದು ಹೇಳಿದರು.

700ಕ್ಕೂ ಹೆಚ್ಚು ರೈತರು ಹುತಾತ್ಮರಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರು ಅಲುಗಾಡಿಸಲಿಲ್ಲ. ಬದಲಾಗಿ, ಸದ್ಯದಲ್ಲೇ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಸೋಲುವ ಮುನ್ಸೂಚನೆಯು ಈ ಮಹತ್ವದ ನಿರ್ಧಾರಕ್ಕೆ ಕಾರಣವಾಗಿದೆ.

ಇಂದಿನ ಘೋಷಣೆಯಲ್ಲೂ ಕೂಡ ಪ್ರಧಾನಿ ನರೇಂದ್ರ ಮೋದಿಯವರು ರೈತರು ಜೀವ ಕಳೆದುಕೊಂಡಿರುವುದರ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣೆ ಹಾಗೂ ಮತಗಳು ಮಾತ್ರ ಆಡಳಿತ ಪಕ್ಷಕ್ಕೆ ಮುಖ್ಯವೆಂದು ಇದರಿಂದಲೇ ತಿಳಿಯುತ್ತದೆ ಎಂದರು.

ರೈತರಿಗೆ ಸಿಕ್ಕ ಜಯವು ಶಾಶ್ವತವಾಗಿ ನೆನಪಿನಲ್ಲಿರಬೇಕು. ಇದು ಸಾಧ್ಯವಾಗಬೇಕಾದರೆ, ಸಂಸತ್ತಿನಲ್ಲಿ ಕಾಯಿದೆಗಳ ತಿದ್ದುಪಡಿಯನ್ನು ಹಿಂಪಡೆದ ದಿನವನ್ನು “ರೈತರ ವಿಜಯ ದಿನ” ಎಂದು ಆಚರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕುಗಳ ರಕ್ಷಣೆಗಾಗಿ ರೈತರು ಹೋರಾಡಿದನ್ನು, ಕಷ್ಟಪಟ್ಟಿದ್ದನ್ನು ಹಾಗೂ ತ್ಯಾಗ ಮಾಡಿದ್ದನ್ನು ಆ ದಿನದಂದು ಸ್ಮರಿಸಿ, ಕೃತಜ್ಞತೆ ಸಲ್ಲಿಸಬೇಕು. ಪ್ರತಿಭಟನೆಯಲ್ಲಿ ಹುತಾತ್ಮರಾದ ರೈತರಿಗೆ ಪ್ರತಿವರ್ಷ ರೈತ ವಿಜಯ ದಿನದಂದು ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಮಾಲವಿಕ ಆಗ್ರಹಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ