ಬೆಂಗಳೂರು: ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ತಡೆಹಿಡಿಯುವಂತೆ ನಿರ್ದೇಶನ ನೀಡಿದೆ. ಹೀಗಾಗಿ ಕರ್ನಾಟಕ ಸರ್ಕಾರ ಇದನ್ನು ಪಾಲನೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಇದೇ ಸೆ.13ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಸೆಪ್ಟೆಂಬರ್ 13ರಂದು ರೈತರಿಂದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ ಕಾಯ್ದೆ ಭೂಸ್ವಾಧೀನ ಕಾಯ್ದೆ ಕಾನೂನು ತಡೆಹಿಡಿಯಬೇಕು ಎಂದು ಆಗ್ರಹಿಸಿ ತಮ್ಮ ನೇತೃತ್ವದಲ್ಲಿ ರೈತ ಸಂಘ ವಿಧಾನಸೌಧ ಮುತ್ತಿಗೆ ಹಾಕಲಿದೆ ಎಂದು ಹೇಳಿದ್ದಾರೆ.
ರೈತರ ಹೆಸರಿನಲ್ಲಿ ಮೋಸ ಮಾಡಿರೋದು ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರ ಮಾತ್ರ ಎಂದು ಕಿಡಿಕಾರಿದ ಕೋಡಿಹಳ್ಳಿ, ಬೊಮ್ಮಾಯಿಯವರು ಬಿ.ಎಸ್. ಯಡಿಯೂರಪ್ಪ ಅವರಂತೆ ಧೋರಣೆ ಮುಂದುವರಿಸಿದರೆ ನಮ್ಮ ಹೋರಾಟ ಎದುರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಸೆಪ್ಟೆಂಬರ್ 27 ಭಾರತ್ ಬಂದ್ ಇದೆ. ಆ ದಿನ ನಾವು ಕರ್ನಾಟಕ ಬಂದ್ ಮಾಡುತ್ತೀವಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ತಪ್ಪು ಮಾಡಿದವರು ಅವರಿಗೆ ಬೇಕಾದ ಭದ್ರತೆ ಮಾಡಿಕೊಂಡಿರ್ತಾರೆ. ಕೊರೊನಾ ಸಮಯದಲ್ಲಿ ಸುಗ್ರೀವಾಜ್ಞೆ ತರೋದು ಸರಿಯೇ ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.