Please assign a menu to the primary menu location under menu

NEWSಕೃಷಿದೇಶ-ವಿದೇಶ

ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಕುಟುಂಬಕ್ಕೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಸಂಸತ್‌ನಲ್ಲಿ ಲಿಖಿತ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು.

ಅದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.

ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದರು. ನಂತರ ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಯಿತು. ಚರ್ಚೆಗೆ ಒಳಪಡಿಸದೇ ಮಸೂದೆಗಳ ಅಂಗೀಕಾರ ಸರಿಯಲ್ಲ.

ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಯಿತು.

ಕೋವಿಡ್‌ನಿಂದ ಬಳಲುತ್ತಿದ್ದವರಿಗೆ ಆಮ್ಲಜನಕ ಪೂರೈಕೆಯಲ್ಲಿ ವಿಳಂಬವಾದಾಗ ನೂರಾರು ಸಂಖ್ಯೆಯಲ್ಲಿ ಜನ ಸಾವಿಗೀಡಾಗಿದ್ದರು. ಮೃತ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸಿದ್ದರು.

ಆಗಲೂ ಸಹ ಕೇಂದ್ರ ಸರ್ಕಾರ, ನಮ್ಮಲ್ಲಿ ಆಕ್ಸಿಜನ್‌ ಕೊರತೆಯಿಂದ ಮೃತಪಟ್ಟವರ ಬಗ್ಗೆ ದತ್ತಾಂಶ ಇಲ್ಲ ಎಂದು ಹಾರಿಕೆಯ ಉತ್ತರವನ್ನು ನೀಡಿ ಆಕ್ರೋಶಕ್ಕೆ ಗುರಿಯಾಗಿತ್ತು. ಈಗ ಮತ್ತೆ ಅದೇ ರೀತಿಯ ಹೇಳಿಕೆ ಮೂಲಕ ಟೀಕೆಗೆ ಗುರಿಯಾಗಿದೆ.

Leave a Reply

error: Content is protected !!
LATEST
ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ... KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿ... ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ NWKRTC: ಕರ್ತವ್ಯದ ವೇಳೆ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿರುವ TA, ATI, TI, ATSಗಳು KSRTC 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣದ ಟಿಕೆಟ್‌ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳ ಗುರುತಿಸಿ: ತುಷಾರ್ ಗಿರಿನಾಥ್ ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್ ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ