NEWSಕೃಷಿನಮ್ಮರಾಜ್ಯ

ರೈತರ ಬಗ್ಗೆ ಮೋದಿ ಸರ್ಕಾರ ಕುರುಡು, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧದ ರೈತರ ಹೋರಾಟಕ್ಕೆ 6 ತಿಂಗಳಾಗಿದ್ದು, ಬೇಡಿಕೆಗಳನ್ನು ಪ್ರಜಾತಾಂತ್ರಿಕವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಸ್ಥಳದಲ್ಲಿ 340 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರದ ಸರ್ಕಾರವೇ ನೇರಹೊಣೆ. ಜಗತ್ತಿನ ಯಾವುದೇ ದೇಶದ ನಾಗರಿಕ ಸರ್ಕಾರವು ಜನರ ಬೃಹತ್ ಚಳವಳಿಯನ್ನು ಈ ಮಟ್ಟದಲ್ಲಿ ನಿರ್ಲಕ್ಷಿಸಿದ ಇತಿಹಾಸವಿಲ್ಲ ಎಂದು ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ದೇಶದ ಶೇ. 80 ರಷ್ಟು ಜನರು ರೈತಾಪಿ ಕುಟುಂಬಗಳೊಂದಿಗೆ ಪ್ರತ್ಯಕ್ಷ ಇಲ್ಲವೇ ಪರೋಕ್ಷ ಸಂಬಂಧವಿರುವವರು. ಇಷ್ಟು ಬೃಹತ್ ಜನ ಸಮುದಾಯದ ಹಕ್ಕೊತ್ತಾಯಗಳಿಗೆ ಮೋದಿ ಸರ್ಕಾರ ಕುರುಡಾಗಿ, ಕಿವುಡಾಗಿ ನಡೆದುಕೊಳ್ಳುತ್ತಿರುವುದು ದುರಂತ ಎಂದು ಕಿಡಿಕಾರಿದ್ದಾರೆ.

ದೇಶದ ಎಲ್ಲ ರಂಗಗಳು ವಿಫಲವಾಗಿದ್ದಾಗ ಕೃಷಿಯು ರಾಜ್ಯದಲ್ಲಿ ಶೇ 6.4 ರಷ್ಟು, ದೇಶದಲ್ಲಿ 3.5 ರಷ್ಟು ಪ್ರಗತಿಯಾಗಿದೆಯೆಂದು ಸರ್ಕಾರಗಳೇ ತಮ್ಮ ವರದಿಗಳಲ್ಲಿ ಹೇಳಿಕೊಂಡಿವೆ. ಹಾಗಿದ್ದರೂ ತೊಗರಿ, ಹೆಸರು, ಸೂರ್ಯಕಾಂತಿ, ಕಡಲೆ ಕಾಯಿ ಮುಂತಾದ ಬೆಳೆಗಳಿಗೆ ಒಳ್ಳೆ ಬೆಲೆ ಏಕೆ ಸಿಗಲಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಮಾರುಕಟ್ಟೆಯಲ್ಲಿ ಬೇಳೆ ಕಾಳುಗಳ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 75 ರಷ್ಟು ಹೆಚ್ಚಾಗಿದೆ. ಅಡುಗೆ ಎಣ್ಣೆಯ ಬೆಲೆ ಶೇ. 120 ಹೆಚ್ಚಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಹಣದುಬ್ಬರದ ಪ್ರಮಾಣ ಶೇ.16 ಹೆಚ್ಚಾಗಿದೆ. ಹಾಗಿದ್ದರೆ ರೈತರು ಬೆಳೆದದ್ದೆಲ್ಲ ಎಲ್ಲಿ ಹೋಯಿತು ಎಂದು ಕೇಳಿದ್ದಾರೆ.

ಬೇಳೆ ಕಾಳುಗಳು ಮತ್ತು ಎಣ್ಣೆ ಕಾಳುಗಳ ಪ್ರಮುಖ ವ್ಯಾಪಾರಿ ಅದಾನಿಯ ವಿಲ್ಮಾರ್ ಕಂಪನಿ. ದೇಶದಲ್ಲಿ ಸುಮಾರು 5 ಮಿಲಿಯನ್ ಟನ್ ತೊಗರಿ ಬೇಳೆ ಬಳಕೆ ಇದೆ. ಒಂದು ಕೆ.ಜಿ. ತೊಗರಿ ಬೇಳೆಯ ಬೆಲೆ 30 ರೂ.ಗಳಷ್ಟು ಹೆಚ್ಚಾದರೆ ಈ ಕಂಪನಿಗೆ ಒಂದು ವರ್ಷಕ್ಕೆ ಒಂದೂವರೆ ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಿನ ಲಾಭವಾಗುತ್ತೆ ಎಂದು ವಿವರಿಸಿದ್ದಾರೆ.

ತೊಗರಿಬೇಳೆಯ ಬೆಲೆ ಕಳೆದ ಕೆಲವು ತಿಂಗಳಿಂದ ಈಚೆಗೆ ಸರಾಸರಿ 100 ರೂಪಾಯಿಗಳಷ್ಟು ಹೆಚ್ಚಾಗಿದೆ. ಅನೇಕ ಕಡೆ ಕೆಜಿಗೆ 180 ರೂ.ವರೆಗೆ ಮಾರಾಟವಾಗುತ್ತಿದೆ. ಕಳೆದ ವರ್ಷ ಇದು 80-90 ರೂ. ಮಾತ್ರ ಇತ್ತು. ಪರಿಸ್ಥಿತಿ ಹೀಗೇ ಇದ್ದರೆ ರೈತರ ಉದ್ಧಾರ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನು ಈ ಹಿಂದೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ “ ರೈತರು ನಡೆಸುತ್ತಿರುವ ಹೋರಾಟ ತಮಗಾಗಿ ಮಾತ್ರವಲ್ಲ. ರೈತರ ಉತ್ಪನ್ನಗಳನ್ನು ಕೊಂಡುಕೊಳ್ಳುತ್ತಿರುವ ಗ್ರಾಹಕರ ಪರವಾಗಿ ನಡೆಸುತ್ತಿರುವ ಹೋರಾಟವು ಆಗಿದೆ”. ಇದು ದೇಶ ಉಳಿಸುವ ಹೋರಾಟವು ಹೌದು. ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ.

ವಿದೇಶಿ ಆಮದನ್ನು ನಿಲ್ಲಿಸಿ, ಅದಾನಿ ಮುಂತಾದವರು ಅಕ್ರಮವಾಗಿ ಸಂಗ್ರಹಿಸಿರುವ ಎಲ್ಲ ಕೃಷಿ ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರುಕಟ್ಟೆಗೆ ತಂದು ಹಣದುಬ್ಬರವನ್ನು ನಿಯಂತ್ರಿಸಿ, ನ್ಯಾಯಯುತ ಬೆಲೆಗಳಿಗೆ ಮಾರುವಂತೆ ಕೇಂದ್ರ ಸರ್ಕಾರ ಮಾಡಬೇಕು. ರೈತರು ಬೆಳೆದ ಬೆಳೆಗಳಿಗೆ ಬೆಲೆ ಖಾತ್ರಿ ಕಾಯಿದೆಯನ್ನು, ಗ್ರಾಹಕರಿಗೆ ನ್ಯಾಯಯುತ ಬೆಲೆಗಳ ಖಾತ್ರಿಯ ಕಾಯಿದೆಯನ್ನು ಜಾರಿಗೊಳಿಸಬೇಕು. ಇದನ್ನು ನಿಭಾಯಿಸಲು ಸರ್ವಪಕ್ಷಗಳ, ತಜ್ಞರ, ರೈತ ಮುಖಂಡರ, ಗ್ರಾಹಕ ಪ್ರತಿನಿಧಿಗಳ ಶಾಶ್ವತ ಸಮಿತಿಯನ್ನು ರಚಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...