Vijayapatha – ವಿಜಯಪಥ
Friday, November 1, 2024
Breaking NewsNEWSಕೃಷಿನಮ್ಮಜಿಲ್ಲೆ

ಸಿಎಂ ಕ್ಷೇತ್ರದಲ್ಲಿ ತಲೆದೋರಿದ ಸಮಸ್ಯೆ: ಭೂಮಿ ಹಕ್ಕು ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ವಕ್ಷೇತ್ರದಲ್ಲಿ ಪರಿಶಿಷ್ಟ ಜನಾಂಗದ ಜನರು 40ವರ್ಷಗಳಿಂದಲೂ ವಾಸಿಸುತ್ತಿರುವ ಭೂಮಿಯ ಹಕ್ಕು ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶಿಕಾರಿಪುರದ ಮಾಯತಮ್ಮನ ಮುಚುಡಿ ಗ್ರಾಮದ ಪರಿಶಿಷ್ಟ ಸಮುದಾಯದ ಕುಟುಂಬಗಳು ಹಾಗೂ ಮೇಲ್ಜಾತಿಯವರ ನಡುವೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿದೆ.

ಈ ಸಂಬಂಧ ಬುಧವಾರ ತಹಸೀಲ್ದಾರ್ ಕವಿರಾಜ್ ಪೊಲೀಸರೊಂದಿಗೆ ಭೇಟಿನೀಡಿ ಪರಿಶಿಷ್ಟ ಸಮುದಾಯದವರು ಬಿತ್ತನೆ ಮಾಡಿದ್ದ ಜಮೀನಿನ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಗೊಳಿಸಿದರು. ಈ ವೇಳೆ ಪರಿಶಿಷ್ಟ ಸಮುದಾಯದ ಕುಟುಂಬದವರು ಸಾಮೂಹಿಕ ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಇದರಿಂದ ವಿಚಲಿತರಾದ ತಹಸೀಲ್ದಾರ್ ಭೂಮಿ ವಶಪಡಿಸಿಕೊಳ್ಳುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶಿಸಿದ್ದಾರೆ.

ಮುಚುಡಿ ಗ್ರಾಮದ ಪರಿಶಿಷ್ಟ ಸಮುದಾಯದ 19 ಕುಟುಂಬಗಳು 40 ವರ್ಷಗಳಿಂದ ಸರ್ವೆ ನಂಬರ್ 128ರಲ್ಲಿ ತಲಾ 2 ಹಾಗೂ 3 ಎಕರೆಯಂತೆ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದರು. ಮಂಜೂರಾತಿಗಾಗಿ 1991ರಲ್ಲಿ ಆ ಕುಟುಂಬಗಳವರು 53 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ ಇವರಿಗೆ ಭೂಮಿ ನೀಡಿಲ್ಲ. ತಾಲೂಕು ಆಡಳಿತ ಕಂದಾಯ ಇಲಾಖೆಯ ಭೂಮಿ ಎಂದು ಹೇಳುತ್ತಿದೆ. ಆದರೆ ಎಕರೆ ಗಟ್ಟಲೆ ಭೂಮಿಯನ್ನು ಅದೇ ಪ್ರದೇಶದಲ್ಲಿ ಮೇಲ್ವರ್ಗದವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಜನರು ಆರೋಪಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ