NEWSಕೃಷಿದೇಶ-ವಿದೇಶರಾಜಕೀಯ

ದೇಶದ ರೈತನ ಮಗಳನ್ನು ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ ಪ್ರಧಾನಿ: ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪ್ರಧಾನಿ ಮೋದಿ ದೇಶದ ರೈತನ ಮಗಳನ್ನು ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ, ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹಳ್ಳಿಯಲ್ಲಿ ನಾನು ಓದುವಾಗ ವಿದ್ಯುತ್, ರಸ್ತೆ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಕೃಷಿ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಇನ್ನು ನಾವು ದೇಶದ ಶೇ. 80ರಷ್ಟು ರೈತರ ಹಿತ ಕಾಯಬೇಕಿದೆ. ರೈತರು ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ ಎಂದು ಹೇಳಿದರು.

ಬೆಟ್ಟದತಾಯಿ ಚಾಮುಂಡೇಶ್ವರಿ ನನಗೆ ಎಲ್ಲ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ದಸರಾ ಆಚರಣೆ ಮಾಡೋದು ಗೊತ್ತಿರಲಿಲ್ಲ. ಆ ವೇಳೆ ಎಲ್ಲರೂ ಗೇಲಿ ಮಾಡಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಮಾಡಿದ ಕಾರ್ಯಗಳನ್ನು ನೆನಪಿಸಿಕೊಂಡರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು