NEWSಶಿಕ್ಷಣ-

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ:  ಮೈಸೂರಿನಲ್ಲಿರುವ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ(ಸೆಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಿಂದ ಪ್ರಸಕ್ತ 2020-21ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ(ರಸಾಯನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅಥವಾ ಹಾಜರಾದವರು ಅರ್ಜಿ ಜುಲೈ 2 ರೊಳಗಗಿ ಅರ್ಜಿ ಸಲ್ಲಿಸಬೇಕು.

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ(DPT) ಮೂರು ವರ್ಷ, ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (DPMT) ಮೂರು ವರ್ಷ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್(PGDPPT) ಎರಡು ವರ್ಷದ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕ ಮತ್ತು ಮುಖ್ಯಸ್ಥ  ಆರ್.ಟಿ. ನಾಗರಳ್ಳಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ  http://eadmission.cipet.gov.in ಅಥವಾ ದೂ. ಸಂಖ್ಯೆ: 0821-2510618, 9480253024,9141075968ಗೆ ಸಂಪರ್ಕಿಸಬಹುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply