ಮೈಸೂರು: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ‘ತೋಟಗಾರಿಕೆ ಮೇಳ-2020’ ಅನ್ನು ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 23 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಈ ಪ್ರಶಿಸ್ತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಯಲಚಹಳ್ಳಿ, ಇಲವಾಲ ಇಲ್ಲಿ ಅಥವಾ ವೆಬ್‍ಸೈಟ್ www.uhsbagalkot.edu.in ನಲ್ಲಿ ಅರ್ಜಿ ಪಡೆದು ಅಕ್ಟೋಬರ್ 29 ರೊಳಗೆ ಇದೇ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0821-2970411 ಅಥವಾ 8147959226 ಗೆ ಕರೆ ಮಾಡುವಂತೆ ಯಲಚಹಳ್ಳಿಯಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.