NEWSಕೃಷಿನಮ್ಮರಾಜ್ಯ

ಮಹತ್ವಾಕಾಂಕ್ಷಿ ರೈತ ಬೆಳೆ ಸಮೀಕ್ಷೆ ಆಪ್ ಬಿಡುಗಡೆ

ಲೋಕಾರ್ಪಣೆಗೊಳಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಇನ್ನಷ್ಟು ಉತ್ತಮ ಬಾಂಧವ್ಯ ವೃದ್ಧಿಸಲು ರೈತರ ಅನುಕೂಲಕ್ಕಾಗಿ ರಾಜ್ಯ ಇ -ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ  “ರೈತ ಬೆಳೆ ಸಮೀಕ್ಷೆ ಆಪ್ ” ಅನ್ನು ಕೃಷಿ ಸಚಿವ ಬಿ‌.ಸಿ.ಪಾಟೀಲ್‌ ಆನ್ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಆಪ್ ಮೂಲಕ ಅಂತರ್ಜಾಲದ ಸಹಾಯದಿಂದ ಕೃಷಿಕರು ಲಾಭ ಪಡೆಯಲು ತಮ್ಮಅಂಗೈನಲ್ಲಿಯೇ ಇನ್ನುಮುಂದೆ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸಮೀಕ್ಷೆ ನಡೆಸುವವರ ವಿವರ ಲಭ್ಯವಾಗಲಿದೆ.

ಹೌದು, ರೈತರ ಅನುಕೂಲಕ್ಕಾಗಿ ಇಲಾಖೆ ಹಾಗೂ ಕೃಷಿ ಸಚಿವರು ಹೊಸಹೊಸ ಯೋಜನೆ ರೈತರಿಗೆ ಲಾಭದಾಯಕವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಲು ಕಾರ್ಯತತ್ಪರರಾಗಿದ್ದು, ಅದರ ಫಲವಾಗಿ ಈ ಆಪ್ ಸಿದ್ಧವಾಗಿದೆ.

ಈ ಮೊಬೈಲ್ ಅಪ್ಲೀಕೇಷನ್ ಅನ್ನು ರೈತರು ಆಂಡ್ರೈಡ್ ಮೊಬೈಲ್ ಸಹಾಯದಿಂದ ಪ್ಲೇ ಸ್ಟೋರ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸುಮಾರು 60 ಎಂಬಿ ಸಾಮರ್ಥ್ಯವುಳ್ಳ ಈ ಆಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ನೋಡುವುದಾದರೆ, ರೈತರು ತಮ್ಮ ಅಂಡ್ರೈಡ್ ಮೊಬೈಲ್ನಲ್ಲಿ ಪ್ಲೇಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆಪ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಮೊಬೈಲ್ ನಂಬರ್ ಅನ್ನು ಓಟಿಪಿ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬೇಕು.

ನೋಂದಣಿಯಾದ ನಂತರ ತಮ್ಮ ಜಮೀನಿನ ಜಿಲ್ಲೆ, ತಾಲೂಕು, ಗ್ರಾಮ, ಸರ್ವೆ ನಂಬರ್ ಸೇರಿದಂತೆ ಜಮೀನಿನ ವಿವರಗಳುನ್ನು ನಮೂದಿಸಿ ಜಮೀನಿನ ಮಾಹಿತಿ ಹಾಗೂ ತಮ್ಮ ಗ್ರಾಮದ GIS ನಕ್ಷೆಯನ್ನು ಡೌನ್ಲೋಡ್ ಮಾಡಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಹಾಗೂ ಇತರೆ ವಿವರಗಳನ್ನು ಮತ್ತು ಛಾಯಾಚಿತ್ರಗಳನ್ನು ಮೊಬೈಲ್ ಆಪ್ ನಲ್ಲಿಸಂಗ್ರಹಿಸಿ ಅಪ್ಲೋಡ್ ಮಾಡಬೇಕು. ಆಗ ರೈತರ ಸರ್ವೆ ನಂಬರ್ ವಾರು ಜಮೀನಿನ ಬೆಳೆಯ ವಿವರಗಳನ್ನು “ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್” ನಲ್ಲಿ ಸಂಗ್ರಹಣೆ ಮಾಡಿ ವಿವಿಧ ಯೋಜನೆಗಳಿಗೆ ಬಳಸಲಾಗುತ್ತದೆ.

ರೈತರ ಅನುಕೂಲಕ್ಕಾಗಿ ಹಾಗೂ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಈ ಆಪ್ ಅನ್ನು ಪರಿಚಯಿಸಲಾಗುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೃಷಿ ಸಚಿವ   ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.
ಮಾಹಿತಿಗಾಗಿ:  https://play.google.com/store/apps/details?id= com.csk.KariffTPKfarmer.cropsurvey
ಈ ಲೈವ್ ಆಪ್ ಗೆ ಲಿಂಕ್ ಅನ್ನು ಕ್ಲಿಕ್ಕಿಸಬಹುದಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...