NEWSರಾಜಕೀಯಸಂಸ್ಕೃತಿ

ಏರೋ ಇಂಡಿಯಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡವೇ ಮಾಯ: ಎಚ್‌ಡಿಕೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಕ್ಷಣಾ‌‌‌ ಸಚಿವ ರಾಜನಾಥ್‌ಸಿಂಗ್ ಯಲಹಂಕದ‌ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ‌ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್