ತಿ.ನರಸೀಪುರ (ಮೈಸೂರು): ಬನ್ನೂರು ಸಮೀಪದ ಅತ್ತಹಳ್ಳಿ ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮದ ಸೋಂಕಿತರ ಬೀದಿಯನ್ನು ಸೀಲ್ಡೌನ್ ಮಾಡಲಾಗಿದೆ.
ಕೊರೊನಾ ಸೋಂಕಿತರನ್ನು ಮೈಸೂರಿನ ನಿಗದಿತ ಕೋವಿಡ್ ಆಸ್ಪತ್ರೆಗೆ ಗುರುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ.
ಸೋಂಕಿತರು ಗರ್ಭಿಣಿ ಆಗಿದ್ದು, ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಇತ್ತೀಚೆಗೆ ಹೋಗಿದ್ದರು. ಈ ವೇಳೆ ಕೊರೊನಾ ಸೋಂಕು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅವರ ಮನೆಯವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇದರೊಂದಿಗೆ ಇದೇ ಗ್ರಾಮದ ಮತ್ತೊಬ್ಬ ಗರ್ಭಿಣಿಗೂ ಕೊರೊನಾ ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ.
ಒಟ್ಟಾರೆ ಕೊರೊನಾ ಗ್ರಾಮಗ್ರಾಮಕ್ಕೂ ಹಬ್ಬುತ್ತಿದ್ದು, ಜನರು ತಮ್ಮ ಜೀವನ ಜೀವವನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಾವು ಹಳ್ಳಿಯಲ್ಲಿ ಇದ್ದೇವೆ ನಮಗೆ ಕೊರೊನಾ ಸೋಂಕು ಬರುವುದಿಲ್ಲ ಎಂಬ ಭ್ರಮೆಯನ್ನು ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚಿನ ಗಮನಕೊಡಬೇಕಿದೆ.
Halli halligu habbhida korona