CrimeNEWSನಮ್ಮರಾಜ್ಯ

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿಹಚ್ಚಿ ಹತ್ಯೆಯತ್ನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರದಕ್ಷಿಣೆ ತರುವಂತೆ ಪೀಡಿಸಿ ಒಪ್ಪದಿದ್ದಕ್ಕೆ ಆಕೆಗೆ ಬೆಂಕಿಹಚ್ಚಿರುವ ಹತ್ಯೆಮಾಡಲು ಯತ್ನಿಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಮೂಲತಃ ಉತ್ತರ ಪ್ರದೇಶದ, ಹಾಲಿ ಬೆಂಗಳೂರಿನ ಟಿ.ಸಿ.ಪಾಳ್ಯದ ನಿವಾಸಿ ಮಹೇಂದ್ರ ಸಿಂಗ್‌ ಎಂಬುವರೆ ಪತಿ ಕುಟುಂಬದ ವರದಕ್ಷಿಣೆ ದಾಹಕ್ಕೆ ಬೆಂಕಿಯಲ್ಲಿ ಅರ್ಧಂಬರ್ಧ ಬೆಂದು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೃಹಿಣಿ. ಈಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ವರದಕ್ಷಿಣೆಗಾಗಿ ಗೃಹಿಣಿಗೆ ಬೆಂಕಿ ಹಚ್ಚಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಪತಿ ಮತ್ತು ಕುಟುಂಬಸ್ಥರು ಸೇರಿ ಮಾಲಾ ಮಹೇಂದ್ರ ಸಿಂಗ್‌ಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಮಾಲ ಮೂಲತಃ ಉತ್ತರ ಪ್ರದೇಶದವರು. ಒಂದು ವರ್ಷದ ಹಿಂದೆ ಸೂರಜ್ ಸಿಂಗ್ ಎಂಬಾತನೊಂದಿಗೆ ಸುಮಾರು 15 ಲಕ್ಷ ರೂಪಾಯಿ ಖರ್ಚು ಮಾಡಿ ಮಾಲಾ ಪಾಲಕರು ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದ ಬಳಿಕ ದಂಪತಿ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.

ಆದರೆ ಈ ವೇಳೆ ವರದಕ್ಷಿಣೆ ಕಿರುಕುಳ ಶುರುವಾಗಿದೆ. ಸೈಟ್ ಕೊಡಿಸುವಂತೆ ಪತಿ ಕುಟುಂಬದವರು ಡಿಮ್ಯಾಂಡ್ ಮಾಡಿದ್ದರಂತೆ. ಹೀಗಾಗಿ ಪತಿ, ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ಮನೆಯಲ್ಲಿ ಒಂಟಿಯಾಗಿದ್ದ ಮಾಲ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಮಾಲಳ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ