NEWSನಮ್ಮರಾಜ್ಯವಿದೇಶ

ಆಟೋ, ಟ್ಯಾಕ್ಸಿ ಚಾಲಕರು ಸರ್ಕಾರ ಪರಿಹಾರ ಧನ 5000 ರೂ. ಪಡೆಯುವುದು ಹೇಗೆ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಪರಿಣಾಮ ಸಂಕಷ್ಟದಲ್ಲಿರುವ ಆಟೋ/ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವ ದೃಷ್ಡಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಅದರಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನವನ್ನು ಸರ್ಕಾರ ನೀಡುತ್ತದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಈ ನಡುವೆ ಅದನ್ನು ಪಡೆಯುವುದು ಹೇಗೆ ಎಂಬ ಗೊಂದಲದಲ್ಲಿ ಇರುವ ಚಾಲಕರಿಗೆ ಸಾರಿಗೆ ಇಲಾಖೆ ಮಾರ್ಗದರ್ಶನ ನೀಡಿದೆ.

ಸರ್ಕಾರ  ಪರಿಹಾರ ನೀಡುವ ಘೋಷಣೆ ಮಾಡಿದ ಬೆನ್ನಲ್ಲೇ ಪೋಸ್ಟ್‌ ಆಫೀಸ್‌ ಮುಂದೆ  ಆಟೋ/ಟ್ಯಾಕ್ಸಿ ಚಾಲಕರು ಅರ್ಜಿ ಸಲ್ಲಿಸಲು ಸರದಿಯ ಸಾಲಿನಲ್ಲಿ ನಿಲುತ್ತಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಇದು ಅಪಾಯಕಾರಿ ಆಗಿದೆ. ಆದ್ದರಿಂದ  ಆಟೋ/ಟ್ಯಾಕ್ಸಿ ಚಾಲಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಎಂದು  ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಮನವಿ ಮಾಡಿದ್ದಾರೆ.

ಫಲಾನುಭವಿ ಚಾಲಕರು ಸರ್ಕಾರದ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ ಮೂಲಕ ಸಲ್ಲಿಸಿ ಹಾಗೂ ಅದನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಎಲ್ಲಾ ಫಲಾನುಭವಿ ಆಟೋ/ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಪರಿಹಾರ ಧನವನ್ನು ಪಡೆದುಕೊಳ್ಳುವ ಕುರಿತಾಗಿ ಆಟೋ ಚಾಲಕರಲ್ಲಿ ಸಾಕಷ್ಟು ಗೊಂದಲಗಳಿರುವುದರಿಂದ ಸಾರಿಗೆ ಇಲಾಖೆ ಈ ಸೂಚನೆಯನ್ನು ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply