NEWSದೇಶ-ವಿದೇಶಸಂಸ್ಕೃತಿ

ಕೋಟ್ಯಂತರ ಭಕ್ತರ ಕನಸು ಶ್ರೀಘ್ರದಲ್ಲೇ ನನಸು: ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ಆಯೋಧ್ಯೆ: ಭಗವಾನ್‌ ಶ್ರೀರಾಮನಮಂದಿರ ಶೀಘ್ರದಲ್ಲೇ ನಿರ್ಮಾಣವಾಗಲಿದ್ದು ಈ ಮೂಲಕ ಕೋಟ್ಯಂತರ ಭಕ್ತರ ಕನಸು ನನಸಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಅಯೋಧ್ಯೆಯಲ್ಲಿ ಬುಧವಾರ ಆಯೋಜಿಸಿದ್ದ ಶ್ರೀರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.

ಶತ ಶತಮಾನಗಳಿಂದ ಭಾರತೀಯರು ಕಾಯುತ್ತಿದ್ದ ಮಂದಿರ ನಿರ್ಮಾಣದ ಕನಸು ಸಾಕಾರಗೊಂಡಿದೆ. ಅದರ ಜತೆಗೆ ಜೈ ಶ್ರೀರಾಮ ಘೋಷಣೆಯೂ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಇಂದು ದೇಶವೇ ರೋಮಾಂಚನಗೊಂಡ ಶುಭದಿನವಾಗಿದೆ. ಎಲ್ಲವೂ ರಾಮಮಯ ಭಾರತವು ಬೆಳಗುತ್ತಿದೆ, ಭಾರತೀಯರು ಭಾವುಕರಾದ ದಿನವಾಗಿದ್ದು, ಬಹು ವರ್ಷಗಳ ನಿರೀಕ್ಷೆ ಇಂದು ಮೈಗೂಡಿದೆ ಎಂದರು.

ಕೋಟಿಕೋಟಿ ರಾಮಭಕ್ತರಿಗೆ ಈ ಶುಭ ಘಳಿಗೆಯ ಕೋಟಿಕೋಟಿ ಶುಭಾಶಯಗಳು. ನನ್ನನ್ನು ಕರೆದು ಈ ಮಹತ್ವದ ಕಾರ್ಯವನ್ನು ನನ್ನ ಮೂಲಕ ನೆರವೇರಿಸಿದ್ದಕ್ಕೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನಾನು  ಆಭಾರಿಯಾಗಿದ್ದಾನೆ ಎಂದು ಭಾವುಕವಾಗಿ ನುಡಿದರು.

ರಾಮ ಮಂದಿರಕ್ಕಾಗಿ ನಡೆದ ಆಂದೋಲನದಲ್ಲಿ ಅರ್ಪಣೆ ಮತ್ತು ತರ್ಪಣ ಇತ್ತು. ಸಂಘರ್ಷ ಮತ್ತು ಸಂಕಲ್ಪ ಇತ್ತು. ಅವರ ತ್ಯಾಗ, ಬಲಿದಾನ ಮತ್ತು ಸಂಘರ್ಷದಿಂದ ಈ ಕನಸು ಇಂದು ನನಸಾಗುತ್ತಿದೆ ಎಂದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭ ಹಲವರು ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ್ದರು. ದೇಶದ ಎಲ್ಲ ಭೂಭಾಗಗಳಲ್ಲಿಯೂ ಹೋರಾಟ ನಡೆದಿತ್ತು. ಆಗಸ್ಟ್‌ 15 ಎನ್ನುವುದು ಇಂಥ ಲಕ್ಷಾಂತರ ಬಲಿದಾನಗಳ ಪ್ರತೀಕ. ಸ್ವಾತಂತ್ರ್ಯ ಗಳಿಸಬೇಕೆನ್ನುವ ಭಾವನೆಗಳ ಪ್ರತೀಕ. ಇದೂ ಅಷ್ಟೇ. ರಾಮಮಂದಿರಕ್ಕಾಗಿ ಹಲವು ಪೀಳಿಗೆಗಳು ಅಖಂಡವಾಗಿ ಪ್ರಯತ್ನಿಸಿದ್ದವು. ಈ ದಿನ ಅವರ ತ್ಯಾಗ ಮತ್ತು ಸಂಕಲ್ಪದ ಪ್ರತೀಕ ಎಂದು ಹೇಳಿದರು.

ರಾಮನ ಮಂದಿರ ನಿರ್ಮಾಣದಿಂದ ಅಯೋಧ್ಯೆಯ ಭವ್ಯತೆ ಹೆಚ್ಚಾಗುವುದಷ್ಟೇ ಅಲ್ಲ. ಇಲ್ಲಿನ ವಾತಾವರಣವೇ ಬದಲಾಗಲಿದೆ.  ಇತಿಹಾಸ ಪುಟಗಳಲ್ಲಿ ಏನೆಲ್ಲಾ ಆಗಿ ಹೋದರು ರಾಮ ನಮ್ಮ ಮನದಲ್ಲಿ ವಿರಾಜಮಾನನಾಗಿದ್ದಾನೆ. ಬದುಕಿನ ಪ್ರೇರಣೆಗಾಗಿ ಇಂದಿಗೂ ನಾವು ರಾಮನತ್ತ ನೋಡುತ್ತೇವೆ. ಸಂಸ್ಕೃತಿಯ ಆಧಾರವಾಗಿರು ರಾಮನ ಭವ್ಯದಿವ್ಯ ಮಂದಿರಕ್ಕಾಗಿ ಇಂದು ಭೂಮಿಪೂಜೆ ಆಗಿದೆ. ಇಲ್ಲಿಗೆ ಬರುವ ಮೊದಲು ನಾನು ರಾಮನ ಕೆಲಸಗಳನ್ನು ಹನುಮ ಶ್ರದ್ಧೆಯಿಂದ ಮಾಡುತ್ತಿದ್ದ ಹನುಮಂತನ ಗುಡಿಗೆ ಹೋಗಿದ್ದೆ.

ಶ್ರೀರಾಮಚಂದ್ರ ಪರಿವರ್ತನೆಯ ಪ್ರತಿಪಾದಕ. ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣ.

ಶ್ರೀರಾಮ ಎಂದು ಬರೆದ ಕಲ್ಲುಗಳಿಂದ ಸೇತುವೆ ನಿರ್ಮಿಸಿದಂತೆ ರಾಮಮಂದಿರವೂ ನಿರ್ಮಾಣವಾಗಲಿದೆ. ಯುಗಯುಗಗಳ ತನಕ ಈ ರಾಮಮಂದಿರ ಜಗತ್ತಿಗೆ ಮಾನವತೆಯ ಮಾರ್ಗದರ್ಶನ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು. ಭಾರತವೂ ಮುನ್ನಡೆಯಬೇಕು ಎಂದರು.

ಅನೇಕತೆಯಲ್ಲಿ ಏಕತೆಯನ್ನು ತಂದುಕೊಡಬಲ್ಲವನು ರಾಮ. ಪ್ರತಿಯೊಂದು ಸಮುದಾಯ, ದೇಶದವರೂ ರಾಮ. ರಾಮಾಯಣದ ಜತೆಗೆ ನಂಟು ಹೊಂದಿದ್ದಾರೆ. ಅಯೋಧ್ಯಾ ಕೇಂದ್ರ ಸ್ಥಾನವಾಗಿ ಎಲ್ಲೆಲ್ಲಿ ರಾಮ, ರಾಮಾಯಣ ಪಸರಿಸಿಕೊಂಡಿದೆಯೋ ಅವೆಲ್ಲವನ್ನೂ ಜೋಡಿಸುವ ಸರ್ಕೀಟ್ ರಚನೆಯಾಗಲಿದೆ. ಭಾರತದಲ್ಲೇ ಒಂದೊಂದು ರಾಜ್ಯದಲ್ಲಿ ಒಂದೊಂದು ರಾಮಾಯಣದ ಕಥೆ ಸಿಗುತ್ತದೆ.  ವಿದೇಶಗಳಲ್ಲೂ ರಾಮಕಥಾ ವಿವರಣೆ, ರಾಮಾಯಣದ ವಿವರಣೆ ಸಿಗುತ್ತದೆ. ನಮ್ಮ ಅರಿವು, ಜೀವನಾದರ್ಶಗಳು ಜಗತ್ತಿನಾದ್ಯಂತ ಹೇಗೆ ಪಸರಿಸಿದೆ ಎಂಬುದಕ್ಕೆ ಇದು ಒಂದು ನಿದರ್ಶನವೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್