NEWSನಮ್ಮಜಿಲ್ಲೆರಾಜಕೀಯ

ಬೇಹುಗಾರಿಕೆಯಲ್ಲಿ ಎಚ್‌ಡಿಡಿ, ಸಿದ್ದು ಹೆಸರು: ಚೀನಾದ ಗೂಢಾಚಾರಿಕೆಗೆ ಸಿದ್ದರಾಮಯ್ಯ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬಾದಾಮಿ: ಒಂದು ದೇಶ ಮತ್ತೊಂದು ದೇಶದ ಬಗ್ಗೆ ಗೂಢಾಚಾರಿಕೆ ಮಾಡುವುದೇ ತಪ್ಪು ಎಂದು ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬಂದಿರುವ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸೋಮವಾರದಿಂದ ತಮ್ಮ ವಿಧಾನಸಭಾ ಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ಕೈಗೊಂಡಿರುವ ಅವರು, ಎರಡನೇ ದಿನವಾದ ಮಂಗಳವಾರ ಕೂಡ ಪ್ರವಾಸ ಮುಂದುವರಿಸಿದ್ದು, ಪಟ್ಟಣದಲ್ಲಿ ಕುಡಿಯುವ ನೀರು ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಸೋನಿಯಾ ಗಾಂಧಿ, ಸಿದ್ದರಾಮಯ್ಯ, ಎಚ್‌.ಡಿ.ದೇವೇಗೌಡ ಹೆಸರು ಕೇಳಿಬಂದಿದೆ. ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ನನ್ನ ಹೆಸರು ಕೇಳಿ ಬಂದಿದೆ. ವಿದೇಶಿ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು. ಅಂತವರನ್ನು ಪತ್ತೆ ಹಚ್ಚಿ ಬಲಿಹಾಕಬೇಕು ಎಂದು ಒತ್ತಾಯಿಸಿದರು.

ಶಿರಾ ಬೈ ಎಲೆಕ್ಷನ್ ವಿಚಾರದ ಬಗ್ಗೆ ನಾವಿನ್ನೂ ಚರ್ಚೆ ಮಾಡಿಲ್ಲ, ನಾಳೆ ಈ ಕುರಿತು ಸಭೆ ಕರೆದಿದ್ದೇವೆ. ಸಭೆಯಲ್ಲಿ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗಳ್ಳುತ್ತೇವೆ ಎಂದು ಶಿರಾ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವ ಕುರಿತ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಇದಕ್ಕೂ ಮುನ್ನ ಅಧಿಕಾರಿಗಳ ಜತೆ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಕುರಿತು ಚರ್ಚಿಸಿದರು ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ