NEWSನಮ್ಮಜಿಲ್ಲೆ

ಮುಧೋಳದಲ್ಲಿ 15 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಜಿಲ್ಲೆಯ ಮುಧೋಳದಲ್ಲಿ 15 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 68 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಮುಧೋಳದ 55 ವರ್ಷದ ಪಿ-865 ವ್ಯಕ್ತಿಗೆ ನೆಗಡಿ, ಕೆಮ್ಮು, ಜ್ವರ (ಐ.ಎಲ್.ಐ) ಹಿನ್ನಲೆಯಲ್ಲಿ ಸೋಂಕು ದೃಢಪಟ್ಟರೆ, ಇನ್ನು 16 ವರ್ಷದ ಪಿ-870, 14 ವರ್ಷದ ಪಿ-871, 33 ವರ್ಷದ ಪಿ-872, 21 ವರ್ಷದ ಪಿ-873, 19 ವರ್ಷದ ಪಿ-874, ಪಿ-875, 34 ವರ್ಷದ ಪಿ-876, 30 ವರ್ಷದ ಪಿ-893, 17 ವರ್ಷದ ಪಿ-894, 32 ವರ್ಷದ ಪಿ-895, 20 ವರ್ಷದ ಪಿ-896, 18 ವರ್ಷದ ಪಿ-897, 29 ವರ್ಷದ ಪಿ-898, 80 ವರ್ಷದ ವೃದ್ಧ ಪಿ-899 ಸೋಂಕು ದೃಢಪಟ್ಟಿದ್ದು, ಇವರಿಗೆ ಅಹಮದಾಬಾದ್, ಗುಜರಾತ ಪ್ರಯಾಣದ ಹಿನ್ನ್ನನೆಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 52 ಸ್ಯಾಂಪಲ್‍ಗಳ ಪೈಕಿ 15 ಪಾಜಿಟಿವ್ ಪ್ರಕರಣ, 36 ನೆಗಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಿಂದ ಹೊಸದಾಗಿ ಮತ್ತೆ 65 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನಲ್ಲಿ 938, ಇನ್ಟ್ಸಿಟ್ಯೂಶನ್ ಕ್ವಾರಂಟೈನ್‍ನಲ್ಲಿ ಒಟ್ಟು 409 ಜನ ಇದ್ದಾರೆ. ಇಲ್ಲಿಯವರೆಗೆ ಕಳುಹಿಸಲಾದ ಒಟ್ಟು ಸ್ಯಾಂಪಲ್ 4395. ಈ ಪೈಕಿ 4247 ನೆಗಟಿವ್ ಪ್ರಕರಣ, 68 ಪಾಜಿಟಿವ್ ಪ್ರಕರಣ, ಒಂದು ಮೃತ ಪ್ರಕರಣ ವರದಿಯಾಗಿವೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲೆಯಲ್ಲಿ ಇಲ್ಲಿವರೆಗೆ ಬಾಗಲಕೋಟೆ ತಾಲೂಕಿನಲ್ಲಿ 15, ಮುಧೋಳದಲ್ಲಿ 24, ಜಮಖಂಡಿಯಲ್ಲಿ 10, ಬಾದಾಮಿಯಲ್ಲಿ 18 ಹಾಗೂ ಬನಹಟ್ಟಿಯಲ್ಲಿ 1 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿವರೆಗೆ ಒಟ್ಟು ಕೋವಿಡ್‍ನಿಂದ 27 ಜನ ಗುಣಮುಖರಾಗಿದ್ದು, 40 ಜನ ಇನ್ನು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಸ್ಯಾಂಪಲ್‍ಗಳು ರಿಜೆಕ್ಟ್ ಆಗಿದ್ದು, 14 ದಿನಗಳ ಇನ್ಟ್ಸಿಟ್ಯೂಶನ್ ಕ್ವಾರಂಟೈನ್‍ನಿಂದ ಒಟ್ಟು 264 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ 12 ಕಂಟೈನ್‍ಮೆಂಟ್ ಝೋನ್‍ಗಳು ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ