CrimeNEWSನಮ್ಮಜಿಲ್ಲೆ

ಸಿಡಿಲು ಬಡಿದು ಮೃತಪಟ್ಟ ರೈತ ಕುಟುಂಬಗಳಿಗೆ  ತಲಾ 5 ಲಕ್ಷ ರೂ. ಪರಿಹಾರ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರ ಗ್ರಾಮದ ಮೃತ ರೈತ ಮಹಿಳೆ ಶಾಂತವ್ವ ಭೋವಿ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ.ಗಳ ಪರಿಹಾರಧನ ಚೆಕ್‍ನ್ನು ವಿತರಿಸಿದರು.

ಸಿಡಿಲು ಬಡಿದು ಮೃತಪಟ್ಟದ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ 67 ವರ್ಷದ ರೈತ ಬಸಯ್ಯ ವೀರಭದ್ರಯ್ಯ ಮುಚಖಂಡಿ ಅವರ ಪತ್ನಿಗೆ ಮಂಗಳವಾರ ಪರಿಹಾರಧನದ ಚೆಕ್ ವಿತರಿಸಲಾಯಿತು. ಹೊಸೂರ ಗ್ರಾಮದ 25 ವರ್ಷದ ರೈತ ಮಹಿಳೆ ಶಾಂತವ್ವ ಭೋವಿ ಅವರ ಪತಿ ಅಣ್ಣಪ್ಪನಿಗೆ ಪರಿಹಾರಧನದ ಚೆಕ್‍ನ್ನು ವಿತರಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸದರಿ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತಪಟ್ಟ ನಂದಿಕೇಶ್ವರ ಗ್ರಾಮದ 53 ವರ್ಷದ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಹಂಗರಗಿ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು. ಅದೇ ರೀತಿ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ವೀರಯ್ಯ ಬಸಯ್ಯ ಅಂಗರಗಿ ಕುಟುಂಬಕ್ಕೂ ಸಹ ಭೇಟಿ ನೀಡಿ ಸಾಂತ್ವನ ಹೇಳಿದರು.

ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ರಾಜಶೇಖರ ಶೀಲವಂತ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಬಾದಾಮಿ ತಹಶೀಲ್ದಾರ ಇಂಗಳೆ ಇತರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ