NEWSನಮ್ಮಜಿಲ್ಲೆಶಿಕ್ಷಣ-ಸಂಸ್ಕೃತಿ

ಬಸವನಹಳ್ಳಿ: ವಿವೇಕಾನಂದರ ಆದರ್ಶ ಅಳವಡಿಸಿಕೊಳ್ಳಿ- ಶಾಸಕ ಸಿ.ಟಿ.ರವಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿಕ್ಕಮಗಳೂರು: ಸ್ವಾಮಿ ವಿವೇಕಾನಂದರ ಚಿಂತನೆ ಮತ್ತು ಬದುಕು ಸರ್ವಕಾಲಕ್ಕೂ ಆದರ್ಶ ಪ್ರೇರಣೆಯಾದದ್ದು ಅವರ ಬದುಕಿನಲ್ಲಿನ ಕೆಲವು ಅಂಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ, ಶಾಸಕ ಸಿ.ಟಿ.ರವಿ ಹೇಳಿದರು.

ನಗರದ ಬಸವನಹಳ್ಳಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ಬದುಕು ನಮಗೆ ದಿವ್ಯ ಪ್ರೇರಣೆ ಕೊಡುತ್ತದೆ. ಯಾರು ತಮ್ಮನ್ನು ತಾವು ಸಾಮಾಜಿಕವಾಗಿ ಸಮಾಜಕ್ಕಾಗಿ ಅರ್ಪಿಸಿ ಬದುಕಿರುತ್ತಾರೋ ಅವರೆಲ್ಲರೂ ಅಜರಾಮರಾಗಿ ಉಳಿಯುತ್ತಾರೆ. ಇತಿಹಾಸದ ಸತ್ಯ ಮತ್ತು ವಾಸ್ತವಿಕ ಸತ್ಯವು ಹೌದು ಎಂದು ಹೇಳಿದರು.

ನಮ್ಮ ಜೀವನದಲ್ಲಿ ಉತ್ತಮ ಉಪಕಾರಿಯಾಗಿ ಒಳ್ಳೆಯ ಅಂಶಗಳನ್ನು ನಾವು ಅಳವಡಿಸಿಕೊಂಡರೆ ನಾವು ಹೊಸ ಪರಿವರ್ತನೆಯನ್ನು ಕಾಣುವುದಕ್ಕೆ ಸಾಧ್ಯವಿದೆ ಹಾಗಾಗಿ ನಾವು ವಿವೇಕಾನಂದರ ಕೆಲವು ಚಿಂತನೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜಿ.ಸೋಮಶೇಖರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ನಗರಸಭಾ ಮಾಜಿ ಸದಸ್ಯ ಕೆಂಪನಹಳ್ಳಿ ಪುಷ್ಪರಾಜ್, ಕಾಲೇಜಿನ ಪ್ರಾಂಶುಪಾಲರಾದ ಸಾವಿತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು