NEWSನಮ್ಮರಾಜ್ಯರಾಜಕೀಯ

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್‌ಗೆ!: ಘೋಷಣೆಯಷ್ಟೇ ಬಾಕಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಜೆಪಿ ಹೈಕಮಾಂಡ್ ಅಣತಿಯಂತೆ ದಶಕಗಳ ಬಳಿಕ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮತ್ತೊಮ್ಮೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡು ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡುವ ತಂತ್ರಕ್ಕೆ ಮುಂದಾಗಿವೆ. ಹೀಗಾಗಿ ಹೈಕಮಾಂಡ್ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಗೆ ರಾಜ್ಯದಲ್ಲಿ ಬಲವಾದ ಪೆಟ್ಟು ಕೊಟ್ಟಿದೆ ಎಂದೇ ಹೇಳಬಹುದಾಗಿದೆ.

ಹೌದು! ಇದಕ್ಕೆ ಕಾರಣವಾಗಿರುವುದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ. ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮತ್ತೊಮ್ಮೆ ಅಧಿಕೃತವಾಗಿ ಹೊಂದಾಣಿಕೆ ಮಾಡಿಕೊಂಡಿವೆ.

ಈ ನಡುವೆ ಸಂಖ್ಯಾಬಲ ಇಲ್ಲದಿದ್ದರೂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹಮದ್ ಅವರು ಕೂಡ ನಾಮಪತ್ರ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.

ವಿಧಾನಪರಿಷತ್ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ಕಾರ್ಯದರ್ಶಿ ಹಾಗೂ ಚುನಾವಣಾ ಅಧಿಕಾರಿ ಮಹಾಲಕ್ಷ್ಮೀ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಮೂಲಕ ಚುನಾವಣೆಯಲ್ಲಿ ಹೊರಟ್ಟಿ ಅವರು ಗೆಲ್ಲುವುದು ಖಚಿತವಾಗಿದ್ದು, ವಿಧಾನ ಪರಿಷತ್ ಸಭಾಪತಿಯಾಗಿ ಅವರ ಹೆಸರು ಘೋಷಣೆ ಆಗುವುದು ಮಾತ್ರ ಬಾಕಿ ಇದೆ.

ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹಮದ್ ಅವರು ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಜಮೀರ್ ಅಹಮದ್ ಖಾನ್, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಹೈಕಮಾಂಡ್ ಸೂಚನೆಯಂತೆ ಬಿಜೆಪಿ ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದು ವಿಧಾನಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದರು ಎನ್ನಲಾಗಿದೆ. ಇನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಜೊತೆಗೆ ಮೈತ್ರಿ ಸರ್ಕಾರ ರಚಿಸಿದ್ದ ಜೆಡಿಎಸ್ ನಾಯಕರು 2018 ಡಿಸೆಂಬರ್ 12ರಂದು ಪರಿಸತ್‌ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದರು ಮೈತ್ರಿ ಸರ್ಕಾರದ ಪತನದ ನಂತರ ವಿಧಾನಪರಿಷತ್ ನಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ .

ತಮ್ಮ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದ ಹಿನ್ನೆಲೆಯಲ್ಲಿ ಫೆ. 5ರಂದು ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಕ್ಕೂ ಮೊದಲು ವಿಧಾನ ಪರಿಷತ್ ನಲ್ಲಿ ಡಿಸೆಂಬರ್ 15 2020 ರಂದು ನಡೆದಿದ್ದ ಘಟನೆಯಿಂದ ಮನನೊಂದು ಉಪಸಭಾಪತಿಯಾಗಿದ್ದ ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು . ಹೀಗಾಗಿ ಅದು ಇಡೀ ಪ್ರಕರಣ ರಾಜ್ಯದ ರಾಜಕೀಯ ಇತಿಹಾಸಕ್ಕೆ ಒಂದು ಕಪ್ಪುಚುಕ್ಕೆ ಯಂತಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್