NEWSನಮ್ಮಜಿಲ್ಲೆಸಂಸ್ಕೃತಿ

ಅಶ್ವಾರೂಢ ಬಸವಣ್ಣನವರ ಕಂಚಿನ ಪ್ರತಿಮೆ ಉದ್ಘಾಟಿಸಿದ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಈಗಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ನಗರ ಕೇಂದ್ರಭಾಗ ಬಸವೇಶ್ವರ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆಯ ಸುತ್ತಲು ಅನುಭವ ಮಂಟಪ ಪರಿಕಲ್ಪನೆಯಡಿ ಮರುವಿನ್ಯಾಸಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮಹಾಪೌರರ ಅನುದಾನದಡಿ ವಿನ್ಯಾಸಗೊಂಡ ನಗರದ ಬಸವೇಶ್ವರ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಕಂಚಿನ ಪ್ರತಿಮೆ ಉದ್ಘಾಟಿಸಿ ಮಾತನಾಡಿದರು.

ಹನ್ನರೆಡನೆಯ ಶತಮಾನದಲ್ಲಿ ರಾಜ ಬಿಜ್ಜಳನ ಪ್ರಧಾನಿಯಾಗಿದ್ದ ಬಸವಣ್ಣನವರು ಅನುಭಾವಿ, ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಿಚಾರವಾದಿ, ಸಮಾಜವಾದಿ, ಅಹಿಂಸಾವಾದಿ, ದಲಿತೋದ್ಧಾರಕ ಮತ್ತು ಸ್ತ್ರೀ ಕುಲೋದ್ಧಾರಕರಾಗಿದ್ದಾರೆ ಎಂದರು.

ಬಸವಣ್ಣನವರು ಶ್ರಮ ಜೀವನದ ಘನತೆಯನ್ನು ಎತ್ತಿ ಹಿಡಿದು “ಕಾಯಕವೇ ಕೈಲಾಸ” ವೆಂದು ಸಾರಿದ ಮಹಾಚೇತನ. ಕನ್ನಡ ಸಾಹಿತ್ಯದಲ್ಲಿ ನೂತನ ಮಾರ್ಗವನ್ನು ನಿರ್ಮಿಸಿದವರು.  ಅಸ್ಪೃಶ್ಯತೆ, ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡಲು ತಮ್ಮ ಆಧ್ಯಾತ್ಮಿಕ ಮತ್ತು ನೈತಿಕ ಮೌಲ್ಯಗಳ ಮೇಲೆ ವರ್ಣ-ವರ್ಗರಹಿತ ಸಮಾಜವನ್ನು ರೂಪಿಸಲು ಮತ್ತು ಧರ್ಮ ಹಾಗೂ ಸಮಾಜದಲ್ಲಿ ಪ್ರಜಾಪ್ರಭುತ್ವವನ್ನು ನೆಲೆಗೊಳಿಸಲು ಪ್ರಯತ್ನಿಸಿದವರು ಎಂದು ಸ್ಮರಿಸಿದರು.

ಮೇಯರ್‌ ಗೌತಮ್‌ ಕುಮಾರ್‌,  ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ,  ವಸತಿ ಸಚಿವ  ವಿ.ಸೋಮಣ್ಣ,  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್,  ಶಾಸಕರಾದ   ರಿಜ್ವಾನ್ ಹರ್ಷದ್,  ಉದಯ್ ಬಿ. ಗರುಡಾಚಾರ್, ಎಸ್.ಆರ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ,  ಉಪ ಮೇಯರ್ಮ‌ ರಾಮಮೋಹನ ರಾಜು, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್,  ಆಯುಕ್ತ ಎನ್.ಮಂಜುನಾಥ್ ಪ್ರಸಾದ್  ಉಪಸ್ಥಿತರಿದ್ದರು.

 

 

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...