Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆರಾಜಕೀಯ

ಮೈಸೂರಿನಲ್ಲೂ ಬಿಡಿಎ ಮಾದರಿ ವಸತಿ ಸಮುಚ್ಚಯ ನಿರ್ಮಾಣ: ಸಚಿವ ಸೋಮಶೇಖರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆಂಗೇರಿಯ ಕೊಮ್ಮಘಟ್ಟದಲ್ಲಿ ನಿರ್ಮಿಸಲಾಗಿರುವ ಬಹುಮಹಡಿ ವಸತಿ ಸಮುಚ್ಚಯವನ್ನು ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಆಯುಕ್ತರ ನಿಯೋಗ ಭೇಟಿ ಮಾಡಿ ಪರಿಶೀಲನೆ ನಡೆಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ಗೌಡ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಹುಮಹಡಿ ವಸತಿ ಸಮುಚ್ಚಯ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಸಬಂಧ ಇಲ್ಲಿನ ವಸತಿ ಸಮುಚ್ಚಯದ ವಿನ್ಯಾಸ, ರಚನೆ ಸೇರಿದಂತೆ ಎಷ್ಟು ಜಾಗದಲ್ಲಿ 2 ಬೆಡ್ ರೂಂ ಹಾಗೂ 3 ಬೆಡ್ ರೂಂ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂಬಿತ್ಯಾದಿ ಮಾಹಿತಿಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ , ಆಯುಕ್ತ ಡಾ. ನಟೇಶ್, ತಾಂತ್ರಿಕ ವರ್ಗದವರು ಬೆಂಗಳೂರಿನ ಬಿಡಿಎ ಅಧಿಕಾರಿಗಳು, ಇಂಜಿನಿಯರ್‌ಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದರು.

ಇನ್ನು ಯಾವ ತಂತ್ರಜ್ಞಾನದ ಮೂಲಕ ಕಟ್ಟಲಾಗಿದೆ? ಇಂತಹ ಮನೆಗಳನ್ನು ಬೆಂಗಳೂರು ವಲಯದಲ್ಲಿ ಎಲ್ಲೆಲ್ಲೆ ಕಟ್ಟಲಾಗಿದೆ? ಕಟ್ಟಲಾಗುತ್ತಿದೆ? ಇದರ ಬಗ್ಗೆ ಸಾರ್ವಜನಿಕರಿಂದ ಸ್ಪಂದನೆ ಹೇಗಿದೆ? ಕಡಿಮೆ ದರದಲ್ಲಿ ಮನೆ ನಿರ್ಮಾಣ ಮಾಡುವ ಯಾವುದಾದರೂ ಪ್ಲ್ಯಾನ್ ಇದೆಯೇ? ಎಂಬಿತ್ಯಾದಿ ವಿಷಯಗಳ ಬಗ್ಗೆ ನಿಯೋಗವು ಮಾಹಿತಿ ಪಡೆಯಿತು.

ಲಿಫ್ಟ್ ಗಳು, ಸ್ಟೇರ್ ಕೇಸ್ ಗಳು, ಮಳೆ ಇಂಗುಗುಂಡಿ ನಿರ್ಮಾಣ, ರಸ್ತೆಗಳು, ಚರಂಡಿ ವ್ಯವಸ್ಥೆ ಸೇರಿ ಇನ್ನಿತರ ಮೂಲ ಸೌಕರ್ಯಗಳ ಬಗ್ಗೆಯೂ ನಿಯೋಗವು ಮಾಹಿತಿ ಪಡೆದುಕೊಂಡಿದ್ದು,
ಅಪಾರ್ಟ್ ಮೆಂಟ್ ವಿನ್ಯಾಸ, ಒಳಾಂಗಣ ವ್ಯವಸ್ಥೆ, ಮೂಲಸೌಕರ್ಯಗಳ ಬಗ್ಗೆ ಇದೇ ವೇಳೆ ವಾಸವಾಗಿರುವ ನಿವಾಸಿಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ ಎಂದು ವಿವರಿಸಿದರು.

ಮೈಸೂರು ಜನತೆಗೆ ಕಡಿಮೆ ದರದಲ್ಲಿ ಗುಣಮಟ್ಟದ ಮನೆಗಳನ್ನು ಅವರಿಗೆ ಇಷ್ಟವಾಗುವ ರೀತಿಯಲ್ಲಿ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. ಇಲ್ಲಿನ ರೂಪುರೇಷೆಗಳು ಸೇರಿ ಎಲ್ಲ ಮಾಹಿತಿಗಳನ್ನು ಪಡೆದು ಮೈಸೂರಿಗೆ ಬೇಕಾದಂತಹ ರೀತಿಯಲ್ಲಿ ಮಾರ್ಪಡಿಸಿ ನಿರ್ಮಾಣ ಮಾಡಲಾಗುವುದು ಎಂದರು.

ಮೈಸೂರು ಹೊರವಲಯ, ರಿಂಗ್ ರೋಡ್ ಸೇರಿ ಹಲವೆಡೆ 6ರಿಂದ 8 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಜನರ ಸ್ಪಂದನೆ ನೋಡಿಕೊಂಡು. ನಾವು ಮುಂದೆ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡುತ್ತೇವೆ. ತ್ವರಿತವಾಗಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ