- ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ರಾಜ್ಯದ 2,709 ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಏಳು ಗಂಟೆಯಲ್ಲಿ ಸರಾಸರಿ ಶೇ.60ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ 36ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಇಂದು ಚುನಾವಾಣೆ ನಡೆಯುತ್ತಿದ್ದು, ತಾಲೂಕಿನ ಮತದಾರರು ಹುಮ್ಮಸ್ಸಿನಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ತಾಲೂಕಿನ ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಪಂ ಚುನಾವಣೆಯಲ್ಲಿ 4ಗಂಟೆಯಲ್ಲಿ ಶೇ.80ರಷ್ಟು ಮತದಾನವಾಗಿತ್ತು. ಇನ್ನುಳಿದಂತೆ ಮೈಸೂರು ಜಿಲ್ಲೆಯಲ್ಲಿ ಶೇ. 70ರಷ್ಟು, ದಾವಣಗೆರೆಯಲ್ಲಿ ಶೇ.66ರಷ್ಟು, ಗದಗದಲ್ಲಿ ಶೇ.58ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಇನ್ನು ಹಲವು ಮತಗಟ್ಟೆಗಳಿಗೆ ಅಶಕ್ತರು, ಅಂಗವಿಕಲರು, ವಯೋವೃದ್ಧರು ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಸಂಜೆ 5ರಿಂದ 6 ಗಂಟೆವರೆಗೆ ಕೋವಿಡ್ ಸೋಂಕಿತರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.