ಕೃಷಿನಮ್ಮರಾಜ್ಯ

ಹಾಸನದಲ್ಲಿ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಆರಂಭ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯಲ್ಲಿ ಇಂದಿನಿಂದ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಿದ್ದು, ರೈತರು ಮಳೆಯಾಧಾರಿತವಾಗಿ ಬಿತ್ತನೆ ಮಾಡಿ ಉತ್ತಮ ಬೆಳೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಶುಭ ಹಾರೈಸಿದ್ದಾರೆ.

ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಆಲೂಗೆಡ್ಡೆ ಬಿತ್ತನೆ ಬೀಜಗಳ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಸುಮಾರು 15,000 ಹೆಕ್ಟೇರ್ ಪ್ರದೇಶದಲ್ಲಿ ಆಲೂಗೆಡ್ಡೆ ಬೆಳೆಯಲಾಗುತ್ತದೆ, ಅದಕ್ಕೆ ಅಗತ್ಯವಾದ ಸುಮಾರು 12 ಸಾವಿರ ಟನ್‍ಗಳಷ್ಟು ಬಿತ್ತನೆ ಬೀಜ ಈಗಾಗಲೇ ದಾಸ್ತಾನಿದ್ದು, ಬೇಡಿಕೆಯ ಆಧಾರದ ಮೇಲೆ ಪುನಃ ಬಿತ್ತನೆ ಬೀಜವನ್ನು ತರಿಸಲಾಗುತ್ತದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಸಂಕಷ್ಟದಲ್ಲಿರುವುದರಿಂದ ಜಿಲ್ಲಾಡಳಿತ ಹಲವಾರು ಸಭೆಗಳನ್ನು ನಡೆಸಿ ಬಿತ್ತನೆ ಬೀಜದ ಗರಿಷ್ಠ ಬೆಲೆಯನ್ನು ನಿಗಧಿ ಮಾಡಲಾಗಿದ್ದು, 2,150 ರೂ ನಿಂದ 2,250 ರೂಗಳ ವರೆಗೆ ಬೆಲೆ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ ರಸಗೊಬ್ಬರ ಹಾಗೂ ಔಷಧಿ ಸೌಲಭ್ಯವನ್ನು ಮಾಡಲಾಗಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೊರೊನಾ ತುರ್ತು ಪರಿಸ್ಥಿತಿಯಲ್ಲಿಯೂ ಪ್ರತಿದಿನ ಎ.ಪಿ.ಎಂ.ಸಿ ನಡೆಯಲಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದಾರೆ, ಅಂತೆಯೇ ಮಾರಾಟಗಾರರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

1 Comment

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ