CrimeNEWS

ಬೆಳಗಾವಿ ಡಿಸಿ ನಿವಾಸದ ಕರ್ತವ್ಯ ನಿರತ ಪೇದೆ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ:  ನಗರ ಮೀಸಲು ಪಡೆ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲಾಧಿಕಾರಿ ನಿವಾಸದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಜಿಲ್ಲಾಧಿಕಾರಿ ನಿವಾಸದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಪ್ರಕಾಶ ಗುರಮಠ (32) ಎಂಬುವರೆ ಆತ್ಮಹತ್ಯೆ ಮಾಡಿಕೊಂಡಿಕೊಂಡವರು.  ಇವರ  ದೇಹದಲ್ಲಿ ಎರಡು ಗುಂಡುಗಳು ಹೊಕ್ಕಿವೆ. ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಯಾವ ಕಾರಣಕ್ಕಾಗಿ ಹೀಗೆ ಮಾಡಿಕೊಂಡಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ಈ ಘಟನೆ ಮುಂಜಾನೆ ಜಿಲ್ಲಾಧಿಕಾರಿ ಗಮನಕ್ಕೆ ಬಂದಿದ್ದು ತಕ್ಷಣ  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರ ನಿವಾಸಕ್ಕೆ ಭದ್ರತೆಯಲ್ಲಿದ್ದ ಈ ಪೇದೆ ಮೂಲತಃ  ಎಂ.ಕೆ.‌ ಹುಬ್ಬಳ್ಳಿ ಬಳಿಯ ಅಂಬಡಗಟ್ಟಿ ಗ್ರಾಮದವರು.   ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಇದ್ದು, ಸಹೋದರ ಇಂಜಿನಿಯರಿಂಗ್ ಓದುತ್ತಿದ್ದಾನೆ. 2012ರಲ್ಲಿ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕೆಲ ವರ್ಷಗಳ ಹಿಂದೆ ಬೆಳಗಾವಿಗೆ ವರ್ಗಾವಣೆ ಮಾಡಿಕೊಂಡು ಬಂದಿದ್ದರು. ಪ್ರಸ್ತುತ ಡಿಸಿ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

1 Comment

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ