ಚಿಕ್ಕೋಡಿ (ಬೆಳಗಾವಿ): ತನ್ನ ಜಮೀನಿನಲ್ಲಿ ತಾನೆ ಕೊರೆಸಿದ ಕೊಳವೆ ಬಾಗಿಗೆ ಬಿದ್ದು ರೈತನೊಬ್ಬ ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ವಿಷಯ ತಿಳಿಯುತ್ತಿದ್ದಂತೆ ರಾಯಬಾಗ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಕೂಡಲೇ ಜೆಸಿಬಿಗಳನ್ನು ಕರೆಸಿ ಬಾವಿಯಲ್ಲಿ ಸಿಲುಕಿರುವ ರೈತನನ್ನು ಮೇಲೆತ್ತಲು ಪ್ರಯತ್ನಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಆದರೆ, 18ರಿಂದ 20 ಅಡಿ ಆಳದಲ್ಲಿ ಸಿಲುಕಿದ್ದ ಲಕ್ಕಪ್ಪ ಅವರ ದೇಹವನ್ನು ಕ್ಯಾಮರಾದಿಂದ ಗಮನಿಸಿ ಜೆಸಿಬಿ ಮೂಲಕ ಮೂರು ಗಂಟೆಗಳು ಕಾರ್ಯಾಚರಣೆ ನಡೆಸಿದರು. ಆತನನ್ನು ಜೀವಂತವಾಗಿ ಹೊರ ತೆಗೆಲು ಸಾಧ್ಯವಾಗಲಿಲ್ಲ. ಕೊಳವೆ ಬಾವಿಯಿಂದ ಶವವನ್ನ ಹೊರ ತೆಗೆದು ಬಳಿಕ ರಾಯಬಾಗ ತಾಲೂಕಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.
ವಾರದ ಹಿಂದಷ್ಟೇ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರಿಸಿದ್ದ ಲಕ್ಕಪ್ಪ. ಈ ವೇಳೆ ಕಡಿಮೆ ನೀರು ಬಂದಿದ್ದರಿಂದ ಮನನೊಂದ ಆ ಕೊಳವೆ ಬಾಲಿಯಲ್ಲೇ ಆತ್ಮಹತ್ಯೆಗೆ ಮಾಡಿಕೊಂಡಿರಬಹುದೇ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಿಷಯ ತಿಳಿದ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನತಂರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ, ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಲು ಹೇಳಿದ್ದೇನೆ. ತನಿಖೆ ನಂತರ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದು ತಿಳಿಯಲಿದೆ ಎಂದು ಹೇಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail