NEWSನಮ್ಮಜಿಲ್ಲೆರಾಜಕೀಯ

ಮಾಸ್ಕ್‌ ಹಾಕಿಕೊಳ್ಳುವವರನ್ನು ಕಪಿಗಳಿಗೆ ಹೋಲಿಸಿದ ಸಂಸದ ಅನಂತಕುಮಾರ್ ಹೆಗಡೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ:  ಇದನ್ನು ಸಮಾಷೆಗಾಗಿ ಹೇಳುತ್ತಿದ್ದೇನೆ ಎನ್ನುವ ಮೂಲಕ ಮಾತು ಆರಂಭಿಸಿದ ಕೇಂದ್ರದ ಮಾಜಿ ಸಚಿವ ಮತ್ತು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಮಗೆ ಸುಮ್ಮನೆ ಹೆದರಿಸಿದ್ದಾರೆ. ಈ ಕೊರೊನಾ, ಕಿರೊನಾ ಏನೋ ಇಲ್ಲ. ತಪ್ಪು ತಿಳಿದುಕೊಳ್ಳಬೇಡಿ ತಮಾಷೆಗೆ ಹೇಳುವುದು ನಾನು, ಎಲ್ಲರನ್ನು ನೋಡಿದಾಗ ನನಗೆ ರಾಮಾಯಣ ತುಂಬಾ ನೆನಪಾಗುತ್ತೆ. ಎಷ್ಟು ಪ್ರೀತಿ ಅಂತ ಹೇಳುವ ಮೂಲಕ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಿಕೊಂಡವರನ್ನು ಕಪಿಗಳಿಗೆ ಹೋಲಿಸಿದ್ದಾರೆ.

ಕೊರೊನಾ ಕುರಿತು ಭಾಷಣ ಮಾಡುವಾಗ ಹೆಗಡೆ ಅವರ ಈ ವಿವಾದಿತ ಹೇಳಿಕೆ  ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಷ್ಟೇ ಅಲ್ಲದೇ ಅವರು ಇನ್ನು ಮುಂದುವರಿದು ಈ ಭ್ರಮೆಯಲ್ಲಿ ನಾವು ಬಹಳ ದಿವಸ ಬದುಕುವುದು ಬೇಡ. ಅದನ್ನು ನಾವು ನಮ್ಮ ಮನೆಯಲ್ಲೇ ಎದುರಿಸಬೇಕಾಗುತ್ತದೆ. ಹೇಗೆ ನೆಗಡಿ ಬಂದಿದೆ. ಜ್ವರ ಬಂದಿದೆ. ಹಾಗೆ ಕೊರೊನಾ ಕೂಡ. ಇದರ ಬಗ್ಗೆ ತೆಲೆಕೆಡಿಸಿಕೊಂಡರೆ ಆರ್ಥಿಕತೆ ದಿವಾಳಿ ಆಗುತ್ತೆ ಎಂಬ  ಹೇಳಿಕೆ  ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಕಾರವಾರದ ಕುಮಟಾದಲ್ಲಿ ಸಂಸದರ ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ವಿವಾದಿತ ಹೇಳಿಕೆ ನೀಡಿದ್ದರು.

ಒಟ್ಟಾರೆ ಹೆಗಡೆ ಅವರ ಹೇಳಿಕೆಯಲ್ಲೇ ವಿವಾದ ಇದೆಯೋ, ಇಲ್ಲ ಅವರ ಮನಸ್ಸಿನಲ್ಲಿ ವಿವಾದ ಇದೆಯೋ ಎಂಬುವುದು ಈಗ ಜನರನ್ನು ಕಾಡುತ್ತಿದೆ. ಅದೇನೆ ಇರಲಿ ಲಕ್ಷಾಂತರ ಜನರಿಂದ ಗೆದ್ದುಬಂದು ಒಬ್ಬ ಜನಪ್ರತಿನಿಧಿಯಾಗಿರುವ ಇವರು ಹೇಳಿಕೆ ಕೊಡುವ ಮೊದಲು ಅದು ಮುಂದೆ ಏನನ್ನು ಸೃಷ್ಟಿಸಬಹುದು ಎಂಬುದರ ಅರಿವಿನ ಜತೆಗೆ ಮತನಾಡಬೇಕಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?