ಬೆಳಗಾವಿ: ಸರ್ಕಾರಿ ನೌಕರರು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ವಡಗಾವಿಯ ದತ್ತಾ ಮಂಡೋಳ್ಕರ್ (58) ಮೃತ ಚಾಲಕ. ದತ್ತಾ ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಗೆ ವಾಪಸ್ ಆಗಿದ್ದರು. ತಡರಾತ್ರಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ನಿನ್ನೆಯಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬೆಂಗಳೂರಿನಲ್ಲಿ ಕುಟುಂಬದವರ ಜತೆಗೇ ಧರಣಿ ಕುಳಿತು ಎಲ್ಲಾ ನೌಕರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.