NEWSನಮ್ಮಜಿಲ್ಲೆರಾಜಕೀಯ

ಬೆಳಗಾವಿಯ ಕೆಂಗಾನೂರ ಗ್ರಾಪಂ: ಜೆಡಿಎಸ್‌ ಬೆಂಬಲಿತ ಮೂವರು ಅಭ್ಯರ್ಥಿಗಳ ಗೆಲುವು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಸವದತ್ತಿ ತಾಲೂಕಿನ ಕೆಂಗಾನೂರ ಗ್ರಾಮ ಪಂಚಾಯಿತಿಯ ಜಾಲಿಕೊಪ್ಪದ 4ನೇ ವಾರ್ಡ್‌ನಿಂದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾಗಪ್ಪ ಬಾಬಣ್ಣ ಬೋಳಶೆಟ್ಟಿ 498 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಡಿ.30ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಿತು. ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಜಾಲಿಕೊಪ್ಪ ವಾರ್ಡ್‌ನಿಂದ ಸ್ಪರ್ಧಿಸಿದ್ದ ನಾಗಪ್ಪ ಬಾಬಣ್ಣ ಬೋಳಶೆಟ್ಟಿ ವಿಜಯದ ಮಾಲೆ ಧರಿಸಿದ್ದಾರೆ.

ಇನ್ನು ಇದೇ ಗ್ರಾಮ ಪಂಚಾಯಿತಿಯಿಂದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಮಲವ್ವ ಶಿವಪ್ಪ ನಂದೆನ್ನವರ 396 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ನಗೆ ಬೀರಿದ್ದಾರೆ.

ಜತೆಗೆ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮತ್ತೊಬ್ಬ ಅನಿಲಕುಮಾರ ಶ್ರೀಶೈಲ ಕೋಡ್ಲಿ ಎಂಬುವರು ಎಸ್ಟಿ ಮೀಸಲಿನಡಿ ಅವಿರೋಧ ಆಯ್ಕೆಯಾಗಿದ್ದಾರೆ.

ಹೀಗೆ ಕೆಂಗಾನೂರ ಗ್ರಾಮ ಪಂಚಾಯಿತಿಯ ವಿಮಲವ್ವ ಶಿವಪ್ಪ ನಂದೆನ್ನವರ, ನಾಗಪ್ಪ ಬಾಬಣ್ಣ ಬೋಳಶೆಟ್ಟಿ ಮತ್ತು ಅನಿಲಕುಮಾರ ಶ್ರೀಶೈಲ ಕೋಡ್ಲಿ ಅವರು ಗ್ರಾಪಂನಲ್ಲಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ಪಕ್ಷ ಕಾರ್ಯಕರ್ತರು ಸಿಹಿ ವಿತರಿಸಿ ಸಂಭ್ರಮಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?