Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಬೆಳಗಾವಿ ಲೋಕಸಭಾ, ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಉಪ ಚುನಾವಣೆ: ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್‌ ತಲ್ಲೀನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಿರೀಕ್ಷೆಯಂತೆ ಸತೀಶ್ ಜಾರಕಿಹೊಳಿ, ಪ್ರಕಾಶ್ ಹುಕ್ಕೇರಿ ಮತ್ತು ಚನ್ನರಾಜು ಈ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಮಾಡಿಕೊಂಡಿದ್ದು, ಅದನ್ನು ಹೈಕಮಾಂಡ್​ಗೆ ಕಳುಹಿಸಲು ಒಬ್ಬರನ್ನು ಆಯ್ಕೆ ಮಾಡಲು ನಿರ್ಧರಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು  ಸ್ಥಳೀಯ ಮುಖಂಡರ ಸಭೆಯನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ  ಹಿರಿಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆದಿದ್ದು, ಪ್ರಮುಖವಾಗಿ ಬೆಳಗಾವಿ ಕ್ಷೇತ್ರಕ್ಕೆ  ಸತೀಶ್ ಜಾರಕಿಹೊಳಿ ಅವರಿಗೆ ಅಂತಿಮವಾಗಿ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಕೊರೊನಾಗೆ ಬಸವಕಲ್ಯಾಣ ಶಾಸಕ ಎಂ.ನಾರಾಯಣರಾವ್ ಬಲಿಯಾಗಿದ್ದು, ಅವರ ಅಗಲಿಕೆಯಿಂದ ತೆರವುಗೊಂಡಿರುವ ಈ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದೆ. ಬೀದರ್ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸವರಾಜ ಬುಲ್ಲಾ ಅವರ ಹೆಸರೂ ರೇಸ್​ನಲ್ಲಿತ್ತು. ಆದರೆ ಅಂತಿಮವಾಗಿ ಕೆಪಿಸಿಸಿ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿದೆ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಮತ್ತು ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರ ಹೆಸರು ಅಂತಿಮಗೊಂಡಿದ್ದು ಹೈಕಮಾಂಡ್ ಅಂಗಳಕ್ಕೆ ಪಟ್ಟಿ ಕಳುಹಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಡೆಯಲು ಸಾಕಷ್ಟು ಕಸರತ್ತುಗಳು ನಡೆದವು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜು ಅವರಿಗೆ ಟಿಕೆಟ್ ಕೊಡಿ ಎಂದು ಸಭೆಯಲ್ಲಿ ಸತೀಶ್ ಜಾರಕಿಹೊಳಿ ಹೇಳಿದರೆ, ಇತ್ತ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಡಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಇನ್ನು ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಕೆಲಸ ಮಾಡುವುದಾದರೆ ತಾನು ಸ್ಪರ್ಧೆಗೆ ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಈ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿದರು. ಈಗ ಸತೀಶ್ ಜಾರಕಿಹೊಳಿ, ಚನ್ನರಾಜು ಮತ್ತು ಪ್ರಕಾಶ್ ಹುಕ್ಕೇರಿ ಪೈಕಿ ಕಾಂಗ್ರೆಸ್ ವರಿಷ್ಠರು ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಬಿಜೆಪಿಯೊಳಗೆ ಭಾರೀ ಪೈಪೋಟಿ ಇದೆ. ಮಲ್ಲಿಕಾರ್ಜುನ ಖೂಬಾ, ಸಂಜಯ್ ಪಟವಾರಿ, ಸೂರ್ಯಕಾಂತ ನಾಗಮಾರಪಲ್ಲಿ (ದಿವಂಗತ ಗುರುಪಾದಪ್ಪ ನಾಗಮಾರಪಲ್ಲಿ ಮಗ) ಅವರ ಹೆಸರು ಪ್ರಮುಖವಾಗಿ ಚಾಲನೆಯಲ್ಲಿವೆ.

ಬೆಳಗಾವಿ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಿಜೆಪಿಯಲ್ಲಿ ಹೆಚ್ಚಾಗುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ದೊಡ್ಡ ದಂಡೇ ಇದೆ. ಸುರೇಶ್‌ ಅಂಗಡಿ ಅವರ ಕುಟುಂಬದ ಒಬ್ಬ ಸದಸ್ಯರಿಗೆ ಟಿಕೆಟ್ ಕೊಡಿ ಎಂಬ ಕೂಗು ಇದೆ. ಹಾಗೆಯೇ, ರಮೇಶ್ ಜಾರಕಿಹೊಳಿ ಅವರು ತಮ್ಮ ಮಗ ಅಮರನಾಥ ಜಾರಕಿಹೊಳಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದಾರೆ. ಪ್ರಭಾಕರ್ ಕೋರೆ ಅವರೂ ಕೂಡ ಬಿಜೆಪಿ ಟಿಕೆಟ್ ಗಿಟ್ಟಿಸಲು ಗಂಭೀರ ಪ್ರಯತ್ನ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮಹಾಂತೇಶ್ ಕೌಜಲಗಿ, ಈಶ್ವರ್ ಖಂಡ್ರೆ, ವೀರ್ ಕುಮಾರ್ ಪಾಟೀಲ್ ಹಾಗೂ ಬೆಳಗಾವಿ, ಬಸವಕಲ್ಯಾಣ ಕ್ಷೇತ್ರಗಳ ಸ್ಥಳೀಯ ಕೆಲ ಮುಖಂಡರು ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ