ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಚಿಕ್ಕಪೇಟೆಯನ್ನು ಸ್ವಯಂಪ್ರೇರಿತವಾಗಿ ಒಂದು ವಾರ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಇದು ಸರಕಾರದ ನಿರ್ಧಾರವಲ್ಲ. ಆದರೆ, ವ್ಯಾಪಾರಸ್ಥರು ಮತ್ತು ವಿವಿಧ ಅಸೋಸಿಯೇಷನ್ ಗಳು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿವೆ.
ಚಿಕ್ಕಪೇಟೆ ಇಂದಿನಿಂದ(ಜೂನ್ 22) ಜೂನ್ 28ರವರೆಗೆ ವ್ಯಾಪಾರಿಗಳೇ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಸಿಲ್ವರ್ ಅಂಡ್ ಗೋಲ್ಡ್ ತಯಾರಕರು, ಎಲೆಕ್ಟ್ರಿಕ್ ಮರ್ಚೆಂಟ್ ಅಸೋಸಿಯೇಷನ್, ಜ್ಯೂವೆಲ್ಲರಿ ಅಸೋಸಿಯೇಷನ್, ಸಿಲ್ಕ್ ಕ್ಲಾತ್ ಅಸೋಸಿಯೇಷನ್, ಸ್ವಿಚ್ ಗೇರ್ ಅಸೋಸಿಯೇಷನ್ ಸೇರಿದಂತೆ ಹಲವು ಅಸೋಸಿಯೇಷನ್ ಗಳು ಬೆಂಬಲ ನೀಡಿವೆ.