NEWSನಮ್ಮರಾಜ್ಯ

ರಾಜ್ಯದಲ್ಲಿ ಕೋವಿಡ್‌-19 ಕೇಕೆ ಇಂ‌ದು ಸಂಜೆ (ಮೇ 15) ವೇಳೆಗೆ 65 ಹೊಸ ಕೊರೊನಾ ಕೇಸು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ.  ಶುಕ್ರವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಮತ್ತು ಸಂಜೆ ವೇಳೆಗೆ 24 ಹೊಸ ಸೋಂಕಿತರು ಪತ್ತೆಯಾಗಿದ್ದು ಒಟ್ಟಾರೆ ಇಂದು 69 ಹೊಸ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಈ ಮೂಲಕ  ರಾಜ್ಯದಲ್ಲಿ    ಸೋಂಕಿತರ ಸಂಖ್ಯೆ 1056ಕ್ಕೆ ಏರಿದ್ದು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆ ಆಗಿದೆ.

ದಕ್ಷಿಣ ಕನ್ನಡದಲ್ಲಿ 16, ಮಂಡ್ಯದಲ್ಲಿ 13,  ಉಡುಪಿಯಲ್ಲಿ ಐದು, ಬೀದರ್‌, ಹಾಸನದಲ್ಲಿ ತಲಾ ಏಳು, ಕಲಬುರಗಿಯಲ್ಲಿ ಮೂರು, ಚಿತ್ರದುರ್ಗದಲ್ಲಿ ಎರಡು, ಶಿವಮೊಗ್ಗ, ಬಾಗಲಕೋಟೆ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಪಾಸಿಟಿವ್‌ ಕೇಸ್‌ ಪತ್ತೆಯಾಗಿದೆ.  ಇನ್ನು ಕ್ವಾರಂಟೈನ್‌ನಲ್ಲಿ ಇಟ್ಟಿದ್ದ ಮಹಿಳೆ ಇಂದು ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ ಒಟ್ಟು 1056 ಕೊರೊನಾ ಪಾಸಿಟಿವ್‌ ಪ್ರಕರಣಗಳು ಇದ್ದು, ಇದರಲ್ಲಿ 480 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇನ್ನು 539 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 36 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ಇನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಎಲ್ಲಾ 90 ಕೊರೊನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಫಲಿತಾಂಶದ ಹಿಂದೆ ಹಗಲಿರುಳು ಕೆಲಸ‌ ಮಾಡಿದ ವೈದ್ಯರು, ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಪೋಲಿಸ್ ಸಿಬ್ಬಂದಿ  ಮತ್ತು ಕೊರೊನ ಸೈನಿಕರ ಶ್ರಮವಿದೆ. ಅವರಿಗೆಲ್ಲ ಈ ಶ್ರೇಯ ಸಲ್ಲಬೇಕು. ಮೈಸೂರು ತೋರಿದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಮ್ಮ ಟ್ವಿಟರ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದಲ್ಲಿ 82,103 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 82,103 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,649 ಮಂದಿ ಮೃತಪಟ್ಟಿದ್ದಾರೆ.27,977 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 45,39,401 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,03,555 ಜನರು ಮೃತಪಟ್ಟಿದ್ದಾರೆ. 17,11,215 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ