ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಿಎಂ ಸೂಚನೆ ಮೇರೆಗೆ ಶನಿವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಅಗತ್ಯ ಸೇವೆಗಳ ಮಾರಾಟಕ್ಕೆ ಮಾತ್ರ ಅವಕಾಸವಿರಲಿದೆ. ಈ ವೇಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡ ಬಾರದು ಎಂದು ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲಿ ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ, ಮಾಂಸದಂಗಡಿ, ಔಷಧ ಮಳಿಗೆಗಳು ತೆರೆದಿರುತ್ತವೆ. ಈ ಅವಧಿಯಲ್ಲಿ ಸಾರ್ವಜನಿಕರು ಹೊರಗಡೆ ಓಡಾಟ ನಡೆಸಬೇಕಾದರೆ ಕಡ್ಡಾಯವಾಗಿ ಮಾಸ್ಕ್(ಮುಖಗವಸು) ಧರಿಸಿರಬೇಕು. ಸಾರ್ವಜನಿಕರು ಬಿಬಿಎಂಪಿ, ಪೊಲೀಸ್, ಆರೋಗ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಜನರು ಅನಗತ್ಯವಾಗಿ ಓಡಾಟ ಮಾಡಿದರೆ ಪೊಲೀಸ್ ಅಧೀಕಾರಿಗಳು ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ. ಈ ಲಾಕ್ ಡೌನ್ ಅನ್ನು ಯಶಸ್ವಿಯಾಗಲು ಎಲ್ಲರೂ ಸಹಕರಿಸಿ. ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಇನ್ನು ಇತ್ತ ಭಾರತದಲ್ಲಿ ಕೋವ್ಯಾಕ್ಸಿನ್ ಲಸಿಕೆ ಉತ್ತಮ ಫಲಿತಾಂಶ ನೀಡಿದ್ದು, ಇದರ ಬಳಕೆಗೆ ಐಸಿಎಂಆರ್ ನಿರ್ದೇಶನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.