Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಕೊರೊನಾಗೆ ಇಂದು ಮೂರು ಮಂದಿ ಬಲಿ, 308 ಜನರಲ್ಲಿ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು, ಶನಿವಾರ ಮಹಾಮಾರಿಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 84 ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಮೂವರು ಮೃತ).

ಇಂದು 308  ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದೆ. ಇನ್ನು 308 ಸೋಂಕಿತರಲ್ಲಿ 208 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, 25 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.

ಇಂದು ಕಲಬುರಗಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 6, ರಾಯಚೂರು 5, ಉತ್ತರ ಕನ್ನಡ 5, ಕೋಲಾರ 4, ದಾವಣಗೆರೆ 3, ಮಂಡ್ಯ 2 ಮತ್ತು ಮೈಸೂರು, ಬಾಗಲಕೋಟೆ, ರಾಮನಗರದಲ್ಲಿ ತಲಾ ಒಂದು ಪ್ರಕರಣಗಳು ಬೆಳಕಿಗೆ ಬಂದಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ     https://play.google.com/store/apps/detail

 ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 24 ಗಂಟೆಯೊಳಗೆ 3 ಮಂದಿ  ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 209 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 3648ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3092 ಸಕ್ರಿಯ ಪ್ರಕರಣಗಳಿದ್ದು, 15 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 310,367 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 310,367 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 8,895 ಮಂದಿ ಮೃತಪಟ್ಟಿದ್ದಾರೆ. 155,290 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,773,760 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 428,926 ಜನರು ಮೃತಪಟ್ಟಿದ್ದಾರೆ 3,986,924 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ