Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಜೂನ್‌‌ 15- ಕೊರೊನಾಗೆ ರಾಜ್ಯದಲ್ಲಿ ಇಬ್ಬರು ಬಲಿ, 213ಮಂದಿಗೆ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು ಸೋಮವಾರ ಮಹಾಮಾರಿಗೆ ಮತ್ತೆ ಇಬ್ಬರು  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 91 ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಮೂವರು ಮೃತ).

ಇಂದು 213 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಇನ್ನು 213 ಸೋಂಕಿತರಲ್ಲಿ 113 ಮಂದಿ ಅಂತಾರಾಜ್ಯ ಪ್ರಯಾಣಿಕರು ಮತ್ತು 23 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದವರಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇಬ್ಬರ ಸಾವು
ರೋಗಿ 7060: ಧಾರವಾಡದ 65 ವರ್ಷದ ವೃದ್ಧ ರೋಗಿ-6222ರ ಜೊತೆ ಸಂಪರ್ಕ ಹೊಂದಿದ್ದರು. ಜೂನ್ 14ರಂದು ದಾಖಲಾಗಿದ್ದ ವೃದ್ಧ ಅಂದೇ ಮೃತಪಟ್ಟಿದ್ದ್ದಾದರು.
ರೋಗಿ 7185: ಬೆಂಗಳೂರಿನ 75 ವರ್ಷದ ವೃದ್ಧೆ. ಜ್ವರದ ಲಕ್ಷಣಗಳ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 13ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 15ರಂದು ಸಾವನ್ನಪ್ಪಿದ್ದಾರೆ.

ಕಲಬುರಗಿ 48, ಬೆಂಗಳೂರು ನಗರ 35, ಧಾರವಾಡ 34, ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ , ಬಾಗಲಕೋಟೆ , ಶಿವಮೊಗ್ಗ ತಲಾ ಮೂರು, ಉಡುಪಿ , ಹಾವೇರಿ, ರಾಮನಗರದಲ್ಲಿ ತಲಾ ಎರಡು, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 180  ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 4135 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2987 ಸಕ್ರಿಯ ಪ್ರಕರಣಗಳಿದ್ದು, 56 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 333,475 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 333,475 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 9,524 ಮಂದಿ ಮೃತಪಟ್ಟಿದ್ದಾರೆ. 169,987 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 8,028,252 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು  436,276 ಜನರು ಮೃತಪಟ್ಟಿದ್ದಾರೆ 4,148,120 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ