Please assign a menu to the primary menu location under menu

NEWSನಮ್ಮರಾಜ್ಯ

ಜೂನ್‌ 9- ಕರ್ನಾಟಕದಲ್ಲಿ 161 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ  ತನ್ನ ಅಟ್ಟಹಾಸವನ್ನು ಇಂದು ಮುಂದುವರಿಸಿದ್ದು 161  ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.ಜತೆಗೆ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದು ಈವರೆಗೆ 68 ಮಂದಿ ಮೃತಪಟ್ಟಿದ್ದಾರೆ. ( ಅನ್ಯಕಾರಣದಿಂದ ಇಬ್ಬರ ಸಾವು).

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 164 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

161 ಸೋಂಕಿತರ ಪೈಕಿ 91 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, 24 ಜನರು ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಯಾದಗಿರಿಯಲ್ಲಿ 61, ಬೆಂಗಳೂರು ನಗರದಲ್ಲಿ 29, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 23, ಕಲಬುರಗಿಯಲ್ಲಿ 10, ಬೀದರ್ ನಲ್ಲಿ 9, ದಾವಣಗೆರೆಯಲ್ಲಿ 8, ಕೊಪ್ಪಳದಲ್ಲಿ 6, ಶಿವಮೊಗ್ಗದಲ್ಲಿ 4, ವಿಜಯಪುರ, ಚಿಕ್ಕಬಳ್ಳಾಪುರ, ಮೈಸೂರು ಮತ್ತು ಧಾರವಾಡದಲ್ಲಿ ತಲಾ 2, ಬಾಗಲಕೋಟೆ, ತುಮಕೂರು, ಚಾಮರಾಜನಗರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

ಇಲ್ಲಿಯವರೆಗೆ 2605 ಮಂದಿ ಗುಣಮುಖರಾಗಿದ್ದು, 3248 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 12 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಬೆಂಗಳೂರು ನಗರದ 65 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಜೂನ್ 3ರಂದು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ರಕ್ತದೊತ್ತಡ, ಮಧುಮೇಹ, ಕಿಡ್ನಿ ತೊಂದರೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರು.

ಕಲಬುರಗಿಯ 17 ವರ್ಷದ ಯುವತಿ ಸೋಂಕಿನ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಜ್ವರ, ತಲೆನೋವು, ಉಸಿರಾಟದ ತೊಂದರೆ ಮತ್ತು ನರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ದೇಶದಲ್ಲಿ 268,125 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 268,125 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 7,487  ಮಂದಿ ಮೃತಪಟ್ಟಿದ್ದಾರೆ. 129,861 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,231,481 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 409,390 ಜನರು ಮೃತಪಟ್ಟಿದ್ದಾರೆ 3,562,273 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ