NEWSಆರೋಗ್ಯನಮ್ಮಜಿಲ್ಲೆ

ಬಿಬಿಎಂಪಿ: ಕೊರೊನಾ ಸೋಂಕಿತರಿಗಾಗಿ 50 ಆಂಬುಲೆನ್ಸ್ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆಂಬುಲೆನ್ಸ್ ಹಾಗೂ ಇತರ ವಾಹನಗಳನ್ನು ನಿಯೋಜನೆ ಮಾಡುತ್ತಿರುವ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ)  ಡಿ.ರಂದೀಪ್ ಮಾಹಿತಿ ನೀಡಿದರು

ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಆಂಬುಲೆನ್ಸ್‌ಗಳು ಹಾಗೂ ಇತರೆ ವಾಹನಗಳ ಅವಶ್ಯಕತೆ ಹೆಚ್ಚಿರುವ ಹಿನ್ನೆಲೆಯಲ್ಲಿ   ತಮ್ಮ ನೇತೃತ್ವದಲ್ಲಿ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಪಾಲಿಕೆ ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳು (ನಗರ/ಗ್ರಾಮಾಂತರ) ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆದ ಸಭೆಯಲ್ಲಿ ಮಾತನಾಡಿದರು.

ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ತಾತ್ಕಾಲಿವಾಗಿ ಹೆಚ್ಚುವರಿ ಆಂಬುಲೆನ್ಸ್ ಗಳ ವ್ಯವಸ್ಥೆ, ಸ್ವಾಬ್ ಪರೀಕ್ಷೆ ನಡೆಸಲು, ಸ್ವಾಬ್ ಮಾದರಿಯನ್ನು ಸಂಬಂಧಪಟ್ಟ ಪ್ರಯೋಗಾಲಯಗಳಿಗೆ ರವಾನಿಸಲು, ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡುವ ಸಲುವಾಗಿ ವಾಹನ ವ್ಯಸಸ್ಥೆ ಕಲ್ಪಿಸಲಾಗುತ್ತಿದೆ. ಅಲ್ಲದೇ ಕೋವಿಡ್-19 ಪಾಸಿಟಿಟ್ ಸೋಂಕಿತ ವ್ಯಕ್ತಿಗಳನ್ನು ತ್ವರಿತವಾಗಿ ಆಸ್ಪತ್ರೆಗಳಿಗೆ ರವಾನಿಸಲು ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲು ಪಾಲಿಕೆ ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

50 ಆಂಬುಲೆನ್ಸ್ ಗಳ ವ್ಯವಸ್ಥೆ
ಬಿಬಿಎಂಪಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು 50 ಆಂಬುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಅದರಂತೆ 6 ಆಂಬುಲೆನ್ಸ್ ಗಳು ಬೆಂಗಳೂರು ನಗರ, 4 ಆಂಬುಲೆನ್ಸ್ ಗಳು ಬೆಂಗಳೂರು ಗ್ರಾಮಾಂತರ, ಪಾಲಿಕೆ 8 ವಲಯಗಳಿಗೆ 38 ಆಂಬುಲೆನ್ಸ್ ಗಳು ಹಾಗೂ ಹೆಚ್ಚುವರಿಯಾಗಿ 2 ಆಂಬುಲೆನ್ಸ್ ಗಳು ಪಾಲಿಕೆ ಕೇಂದ್ರ ಕಚೇರಿಗೆ ನಿಯೋಜನೆ ಮಾಡಿಕೊಳ್ಳಲಾಗಿದೆ. ಈ 2 ಆಂಬುಲೆನ್ಸ್ ಮುಖ್ಯ ಆರೋಗ್ಯಾಧಿಕಾರಿ ಸಪುರ್ದಿಯಲ್ಲಿರುತ್ತದೆ. ಪಾಲಿಕೆ ವಲಯಗಳಿಗೆ ನಿಯೋಜಿಸಿರುವ 38 ಆಂಬುಲೆನ್ಸ್ ಗಳು ಜಂಟಿ ಆಯುಕ್ತರು/ ಆರೋಗ್ಯಾಧಿಕಾರಿಗಳ ಸುಪರ್ದಿಯಲ್ಲಿರುತ್ತವೆ. ಕೋವಿಡ್-19 ಸೋಂಕಿತರನ್ನು ಕರೆದೊಯ್ಯಲು ನಿಯೋಜನೆ ಮಾಡಿರುವ ಆಂಬುಲೆನ್ಸ್ ಗಳಿಗೆ ಜಿಪಿಎಸ್ ಅಳವಡಿಸಿ ಅದರ ಮೇಲೆ ನಿಗಾವಹಿಸಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ನಿಯಂತ್ರಣ ಕೊಠಡಿ ಸ್ಥಾಪನೆ
ಕೋವಿಡ್-19 ಪಾಸಿಟಿವ್ ಸೋಂಕಿತರನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಸಂಬಂಧಪಟ್ಟ ವ್ಯಕ್ತಿಗಳು ವಲಯ ಜಂಟಿ ಆಯುಕ್ತರು/ ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ಕೋವಿಡ್-19 ಪಾಸಿಟಿವ್ ಬಂದಿರುವ ಬಗ್ಗೆ ಮಾಹತಿ ನೀಡಿದರೆ, ಆ ಬಗ್ಗೆ ವಲಯ ಜಂಟಿ ಆಯುಕ್ತರು/ಆರೋಗ್ಯಾಧಿಕಾರಿಗಳು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೂಡಲೆ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಿದ್ದಾರೆ ಎಂದರು.

ಟೆಂಪೋ ಟ್ರಾವೆಲ್ ವ್ಯವಸ್ಥೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳು ಕಂಡುಬಂದ ಬಳಿಕ ಪ್ರಥಮ ಸಂಪರ್ಕಿತರು ಹಾಗೂ ದ್ವಿತೀಯ ಸಂಪರ್ಕಿತರ ಸ್ವಾಬ್ ಸಂಗ್ರಹಕ್ಕಾಗಿ ಪಾಲಿಕೆಯ 8 ವಲಯಗಳಿಗೆ ತಲಾ ಒಂದೊಂದು ವಾಹನ, ಬೆಂಗಳೂರು ನಗರಕ್ಕೆ 5 ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ 4 ವಾಹನಗಳು ಸೇರಿ ಒಟ್ಟು 17 ವಾಹನಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೆ Influenza Like Illness(ILI), severe acute respiratory infection(SARI) ಸೋಂಕಿತರ ಸ್ವಾಬ್ ಸಂಗ್ರಹಕ್ಕಾಗಿ ಪ್ರತ್ಯೇಕವಾಗಿ 5 ವಾಹನಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಶ್ರದ್ಧಾಂಜಲಿ ವಾಹನ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳನ್ನು ಸಾಗಿಸಲು ಪಾಲಿಕೆಯ 8 ವಲಯಗಳಿಗೆ ಒಂದೊಂದು “ಶ್ರದ್ದಾಂಜಲಿ ವಾಹನ”ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಕೋವಿಡ್-19 ಸೋಂಕಿತರು ಮೃತರಾದರೆ ಆ ಆಸ್ಪತ್ರೆಗೆ ಶ್ರದ್ಧಾಂಜಲಿ ವಾಹನ ತೆರಳಿ ಮೃತ ವ್ಯಕ್ತಿಯನ್ನು ನಿಗದಿತ ಚಿತಾಗಾರಕ್ಕೆ ಕೊಂಡೊಯ್ಯುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.

ಸೋಂಕುಶಾಸ್ತ್ರಜ್ಞರ(Epidemiologists) ನಿಯೋಜನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 8 ಮಂದಿ ಸೋಂಕುಶಾಸ್ತ್ರಜ್ಞರನ್ನು ನಿಯೋಜನೆ ಮಾಡಿಕೊಳ್ಳಲಾಗಿದ್ದು, ಕೋವಿಡ್-19 ಪ್ರಕರಣ ಕಂಡುಬಂದ ಸೋಂಕಿತ ವ್ಯಕ್ತಿಯ ಪ್ರಥಮ ಮತ್ತು ದ್ವಿತೀಯ ಸಂಪರ್ಕ ಪತ್ತೆ ಹಚ್ಚುವ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಪ್ರತ್ಯೇಕ ಆಸ್ಪತ್ರೆಗಳು ನಿಗದಿ
ಕೋವಿಡ್-19 ಚಿಕಿತ್ಸೆಗಾಗಿ ಮೂರು ಆಸ್ಪತ್ರೆಗಳನ್ನು ಮೀಸಲಿಡಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆ, ಬೋರಿಂಗ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಅದಲ್ಲದೆ 8 ಆಸ್ಪತ್ರೆಗಳಾದ ಕಮಾಂಡ್ ಆಸ್ಪತ್ರೆ, ಲೆಪ್ರೆಸಿ ಆಸ್ಪತ್ರೆ(ಮಾಗಡಿ ರಸ್ತೆ), ಇಡಿ ಆಸ್ಪತ್ರೆ, ಇ.ಎಸ್.ಐ ಆಸ್ಪತ್ರೆ(ಇಂದಿರಾನಗರ, ರಾಜಾಜಿನಗರ, ಪೀಣ್ಯ). ಸಿ.ವಿ.ರಾಮನ್ ನಗರ ಜನರಲ್ ಆಸ್ಪತ್ರೆ ಹಾಗೂ ಜಯನಗರ ಜನರಲ್ ಆಸ್ಪತ್ರೆಗಳನ್ನು ಕೋವಿಡ್-19 ಆರೋಗ್ಯ ಕೇಂದ್ರಗಳನ್ನಾಗಿಸಲಾಗಿದೆ. ಜೊತೆಗೆ ಹಜ್ ಭವನವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದೆ ಎಂದರು.

ಮೊಬೈಲ್ ಸ್ಯಾಂಪಲ್ ಕಲೆಕ್ಷನ್ ವೆಹಿಕಲ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೊಲೀಸ್ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ ಸಿಬ್ಬಂದಿ, ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳು, ಹೋಟೆಲ್ ಸಿಬ್ಬಂದಿ, ಸ್ವಿಗ್ಗಿ ಬಾಯ್ಸ್ ಸೇರಿದಂತೆ ಇನ್ನಿತರರ ಸ್ವಾಬ್ ಸಂಗ್ರಹಕ್ಕಾಗಿ 1 ಮೊಬೈಲ್ ಸ್ಯಾಂಪಲ್ ವೆಹಿಕಲ್ ಅನ್ನು 3 ದಿನದೊಳಗಾಗಿ ನಿಯೋಜನೆ ಮಾಡಲಾಗುತ್ತದೆ ಎಂದ ತಿಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು