NEWSದೇಶ-ವಿದೇಶವಿಜ್ಞಾನ

ಹೋಟೆಲ್‌ ತೆರೆದು ಮುನ್ನೆಚ್ಚರಿಕೆ ಕ್ರಮ ಅನುಸರಿಸಿ

ರೆಸ್ಟೋರೆಂಟ್‌ ಮಾಲೀಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬರುವಸೋಮವಾರ (ಜೂ.8) ಹೋಟೆಲ್‌  ರೆಸ್ಟೋರೆಂಟ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ, ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆ ಚರ್ಚಿಸಲು ಕರೆದಿದ್ದರ ಸಭೆಯಲ್ಲಿ ಮಾತನಾಡಿ, ಹೋಟೆಲ್‌ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಸರ್ಕಾರದ ಮಾರ್ಗಸೂಚಿ ಪಾಲಿಸುವು ಕಡ್ಡಾಯ ಎಂದು ತಿಳಿಸಿದರು.

ಸಭೆಯಲ್ಲಿ ‌ಭಾಗವಹಿಸಿದ್ದ ಬಸ್ , ಹೋಟೆಲ್  ಹಾಗೂ ಟ್ಯಾಕ್ಸಿ ಮಾಲೀಕರ‌ ಸಂಘಗಳ ನಿಯೋಗ ಸರ್ಕಾರದ ಮುಂದೆ‌ ಕೆಲ ಬೇಡಿಕೆಗಳನ್ನು‌ ಇಟ್ಟಿತು. ಆ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.

ಪ್ರವಾಸೋದ್ಯಮ, ಹೋಟೆಲ್, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಈ ವೇಳೆ ಸಿಎಂ ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ, ಹಿರಿಯ ಅಧಿಕಾರಿಗಳು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply