CrimeNEWSನಮ್ಮಜಿಲ್ಲೆ

ಕಾರ್ಪೋರೇಟರ್ ಮೇಲೆ ಇನ್‍ಸ್ಪೆಕ್ಟರ್‌ ಹಲ್ಲೆ ಆರೋಪ

ನಾಜಿಮಾ ಖಾನ್ ಬೆಂಬಲಿಗ ಮಹಿಳೆಯರಿಂದ ಪ್ರತಿಭಟನೆ ಕ್ರಮಕ್ಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆ.ಆರ್.ಮಾರ್ಕೆಟ್ ಕಾರ್ಪೋರೇಟರ್ ನಾಜಿಮಾ ಖಾನ್ ಮೇಲೆ ಹಲ್ಲೆ ಮಾಡಿದ  ಇನ್‍ಸ್ಪೆಕ್ಟರ್‌ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಟಿಪ್ಪು ನಗರದ ಮಹಿಳೆಯರು ಕಂಟೈನ್‍ಮೆಂಟ್ ಜೋನ್‌ನಲ್ಲೇ ಪ್ರತಿಭಟನೆ ನಡೆಸಿದರು.

ಶುಕ್ರವಾರ ಚಾಮರಾಜಪೇಟೆಯ ಇನ್‍ಸ್ಪೆಕ್ಟರ್ ಕುಮಾರಸ್ವಾಮಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾಜಿಮಾ ಖಾನ್ ಆರೋಪಿಸಿದ್ದರು. ಅದರಿಂದ ಬೇಸರಗೊಂಡ  ನಾಜಿಮಾ ಖಾನ್ ಬೆಂಬಲಿಗ ಮಹಿಳೆಯರು ಹಲ್ಲೆ ಮಾಡಿರುವ ಇನ್‍ಸ್ಪೆಕ್ಟರ್ ವಿರುದ್ಧ ಇಂದು ಟಿಪ್ಪುನಗರದಲ್ಲಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಶಾಸಕ ಜಮೀರ್ ಅಹಮದ್ ಬರುವಂತೆ  ಒತ್ತಾಯಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಕಂಟೈನ್‍ಮೆಂಟ್ ಜೋನ್‌ನಲ್ಲಿ ಕಾರ್ಪೋರೇಟರ್‌ ಓಡಾಡಿದ್ದರು ಎಂದು ಕರ್ತವ್ಯದಲ್ಲಿದ್ದ ಇನ್‍ಸ್ಪೆಕ್ಟರ್ ನಜಿಮಾ ಅವರ ಐಡಿ ಕಾರ್ಡ್ನ್ನು ವಶಕ್ಕೆ ಪಡೆದುಕೊಂಡಿದ್ದರು.  ಆದರೆ ಇನ್‍ಸ್ಪೆಕ್ಟರ್ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದ್ದರು ಎಂದು ನಜಿಮಾ ಆರೋಪಿಸಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒಬ್ಬ ಜನಪ್ರತಿನಿಧಿ ತಮ್ಮ ಏರಿಯಾದಲ್ಲಿ ಓಡಾಡಬಾರದು ಎಂದು ಪೊಲೀಸರು ತಡೆದರೆ ಬಡವರ ಸಮಸ್ಯೆಯನ್ನು ಆಲಿಸುವವರು ಯಾರು. ಬಡವರಿಗೆ ಸ್ಪಂದಿಸದಿದ್ದರೆ ಅವರ ಜೀವನದ ಗತಿಏನು ಎಂದು ಪ್ರತಿಭಟನಾಕಾರರು ಪೊಲೀಸರ ನಡೆಯನ್ನು ಖಂಡಿಸಿದ್ದು ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

1 Comment

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ