NEWSದೇಶ-ವಿದೇಶವಿಜ್ಞಾನ

ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಭಾರತದಲ್ಲೂ ಅವಕಾಶ

ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್  ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುವಿಶ್ವದ ಇತರ ದೇಶಗಳಂತೆ ನಮ್ಮ ದೇಶದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶದ ಬಾಗಿಲು ತೆರೆಯಲಾಗಿದೆ. ಈ ಮೂಲಕ ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ ಎಂದು ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್  ಮಾಹಿತಿ ನೀಡಿದರು.

ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಖಾಸಗಿಯವರ ಸಹಭಾಗಿತ್ವವನ್ನು ಕೇಂದ್ರ ಸರ್ಕಾರ ತರಲಿಚ್ಚಿಸಿದ್ದಿ, ಜತಗೆ  ಈ ಕ್ಷೇತ್ರದ ಸುಧಾರಣಾ ನೀತಿಗಳ ಕುರಿತು ಗುರುವಾರ ಮಾಹಿತಿ ನೀಡಿದರು.

ಇಸ್ರೋದ ಮೂಲಭೂತ ಸೌಕರ್ಯಗಳನ್ನು ಖಾಸಗಿಯವರೂ ಬಳಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಹೀಗಾಗಿ ರಾಕೆಟ್‌ ನಿರ್ಮಾಣ, ಉಪಗ್ರಹ ನಿರ್ಮಾಣ ಮತ್ತು ಉಡಾವಣೆಗಳಂತಹ ಕಾರ್ಯವನ್ನು ಖಾಸಗಿಯವರು ಇನ್ನುಮುಂದೆ ಕೈಗೊಳ್ಳಬಹುದಾಗಿದೆ. ಇದಕ್ಕೆ ಅಗತ್ಯ ನೆರವು, ತಂತ್ರಜ್ಞಾನ ವರ್ಗಾವಣೆಗೆ ಇಸ್ರೊ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಇನ್ನು ಖಾಸಗಿ ಉದ್ಯಮಗಳು ದೇಶದಲ್ಲಿ ಸ್ವತಂತ್ರವಾಗಿ ಬಾಹ್ಯಾಕಾಶ ಚಟುವಟಿಕೆಗಳನ್ನು ನಡೆಸುವುದಕ್ಕೆ  ಬೇಕಾದ ಮಹತ್ವದ ಸುಧಾರಣಾ ನೀತಿಗಳನ್ನು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ (ಇಸ್ರೊ) ಪ್ರಕಟಿಸಿದೆ ಎಂದು ವಿವರಿಸಿದರು.

ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಶಕ್ತಿಯಾಗಿ ಹೊರ ಹೊಮ್ಮಲು ಮತ್ತು ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಚಟುವಟಿಕೆಗಳನ್ನು ನಡೆಸುವುದರಿಂದ ಬಾಹ್ಯಾಕಾಶ ವಿಜ್ಞಾನ ಮೂಲದ ಆದಾಯ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲು ಸಾಧ್ಯವಾಗಲಿದೆ.

ಇನ್ನು ಮುಂದೆ ಬಾಹ್ಯಾಕಾಶ ಸಂಸ್ಥೆಗೆ ಸಮಾನವಾಗಿ ಬೆಳೆಯುವುದಕ್ಕೆ ಅವಕಾಶ ನೀಡುವ ಮಹತ್ವದ ಸುಧಾರಣಾ ಕ್ರಮ ಜಾರಿ ಮಾಡಿದ್ದು, ಇದರಿಂದ ಇಸ್ರೋಗೆ ಬಿಡಿ ಭಾಗಗಳನ್ನು ತಯಾರಿಸುವುದಷ್ಟಕ್ಕೇ ಇಲ್ಲಿಯವರೆಗೆ ಸೀಮಿತವಾಗಿದ್ದ ಖಾಸಗಿಯವರು ಮುನ್ನೆಲೆಗೆ ಬರುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ  ದೇಶದಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ದಿಯ ಹೊಸ ಯುಗವೇ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಖಾಸಗಿಯವರು ಸಂಶೋಧನೆ ಮತ್ತು ಅಭಿವೃದ್ಧಿಯಲ್ಲೂ ತೊಡಗಿಕೊಳ್ಳಬಹುದು. ಇದರಿಂದ ದೇಶದಲ್ಲಿ ಬಾಹ್ಯಾಕಾಶ ಉದ್ಯಮ ಬೆಳೆಯುವುದರ ಜತೆಗೆ ಅಪಾರ ಪ್ರಮಾಣದಲ್ಲಿ ಉದ್ಯೋಗವೂ ಸೃಷ್ಟಿಯಾಗಲಿದೆ. ಅಂತೆಯೇ ರಾಕೆಟ್‌ ನಿರ್ಮಾಣ, ರಾಕೆಟ್‌ ಉಡ್ಡಯನ, ಉಪಗ್ರಹ ಮತ್ತು ಅದರ ಪೇಲೋಡ್‌ ನಿರ್ಮಾಣದಿಂದ ಮೊದಲ್ಗೊಂಡು ಹಲವು ಚಟುವಟಿಕೆಗಳು ಮತ್ತು ಸೇವೆಗಳನ್ನು ಖಾಸಗಿ ವಲಯ ನೀಡಬಹುದಾಗಿದೆ ಎಂದು ತಿಳಿಸಿದರು.

ದೂರಸಂವೇದಿ ನೀತಿ ಮತ್ತು ಉಪ್ರಗ್ರಹ ನೀತಿಯನ್ನೂ ಪರಿಷ್ಕರಿಸಲಾಗುವುದು. ಸುಧಾರಣಾ ಕ್ರಮವಾಗಿ ಹೊಸ ನ್ಯಾವಿಗೇಷನ್‌ ನೀತಿ ಜಾರಿ ಮಾಡುವುದು ಆದರೆ, ಖಾಸಗಿ ಕಂಪನಿಗಳು ಬೇಡಿಕೆ ಪೂರೈಕೆ ಮಾದರಿಗೆ ಸೀಮಿತವಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.

ಖಾಸಗಿ ಕ್ಷೇತ್ರದ ದೊಡ್ಡ, ಸಣ್ಣ ಮಟ್ಟದ ಉದ್ಯಮಗಳು ಮತ್ತು ಸಾರ್ಟ್‌ಅಪ್‌ಗಳು ಭಾಗವಹಿಸಬಹುದು. ಇವರ ಚಟುವಟಿಕೆಗಳ ಗುಣಮಟ್ಟ, ಸುರಕ್ಷತೆ ಮತ್ತು ಭದ್ರತೆಯನ್ನು ಇಸ್ರೊ ನೋಡಿಕೊಳ್ಳಲಿದೆ ಎಂದು ಶಿವನ್ ಭರವಸೆ ನೀಡಿದರು.

ಇನ್ ಸ್ಪೇಸ್ಗೆ ನೋಡಲ್ ಏಜೆನ್ಸಿ ಪಾತ್ರ
ಖಾಸಗಿ ಚಟುವಟಿಕೆಗಳು ಸ್ವಾಯತ್ತವಾಗಿ ಕಾರ್ಯ ನಿರ್ವಹಿಸುತ್ತವೆ. ಈ ಸಂಸ್ಥೆಗಳಿಗೆ ಇಸ್ರೊ ನೋಡಲ್‌ ಏಜೆನ್ಸಿಯಾಗಿರುತ್ತದೆ. ಇದಕ್ಕಾಗಿಯೇ ಖಾಸಗಿ ಉದ್ಯಮಗಳ ಪ್ರತಿನಿಧಿಗಳು, ಇಸ್ರೊ ಮತ್ತು ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ  ʻಇನ್‌ಸ್ಪೇಸ್‌’ ಎಂಬ ಪ್ರತ್ಯೇಕ ಸಂಸ್ಥೆ ಹುಟ್ಟು ಹಾಕುತ್ತೇವೆ. ಇದು ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇನ್‌ಸ್ಪೇಸ್‌ 6 ತಿಂಗಳಲ್ಲಿ ಸ್ಥಾಪನೆ ಆಗಲಿದ್ದು, ಬಾಹ್ಯಾಕಾಶ ಚಟುವಟಿಕೆಗಳಲ್ಲಿ ತೊಡಗುವ ಸಂಸ್ಥೆಗಳಿಗೆ ಅಗತ್ಯ ಜ್ಞಾನವನ್ನು ನೀಡಲಿದೆ. ಆದರೆ, ಸಾಕಷ್ಟು ಖಾಸಗಿ ಸಂಸ್ಥೆಗಳು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಒಪ್ಪಿಗೆ ನೀಡುವ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ನೀಡುತ್ತೇವೆ ಎಂದು ಶಿವನ್‌ ವಿವರಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು